ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಖಾಡ ರೆಡಿಯಾಗಿದೆ. ಮೂರು ಪಕ್ಷಗಳಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ. ಕೆಲ ಆಕಾಂಕ್ಷಿಗಳು ಈಗಾಗಲೇ ಬಂಡಾಯವೆದ್ದಿದ್ದಾರೆ. ಬಂಡಾಯ ಶಮನ ಮಾಡುವ ಕೆಲಸವನ್ನು ಪಕ್ಷಗಳು ಮಾಡುತ್ತಿವೆಯಾದರೂ, ಪ್ರಭಾವಿ ಅಭ್ಯರ್ಥಿಗಳಿಂದ ಹೊಡೆತ ಬೀಳುವ ಸಾಧ್ಯತೆ ಇದೆ. ಇದೀಗ ಕಾಂಗ್ರೆಸ್ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕೂಡ ಬಂಡಾಯವೇಳುವ ಎಲ್ಲಾ ಸಾಧ್ಯತೆ ಇದೆ.
ಈ ಬಾರಿಯ ಚುನಾವಣೆಗೆ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್ ಸಿಗೋದು ಅನುಮಾನ ಎನ್ನಲಾಗುತ್ತಿದೆ. ಟಿಕೆಟ್ ಸಿಗದೆ ಇದ್ದರೆ ಬಂಡಾಯವೇಳುವುದು ಖಚಿತ ಎಂದು ಆಪ್ತ ಮೂಲಗಳಿಂದ ವಿಚಾರ ಹೊರ ಬಿದ್ದಿದೆ. ಯಾಕಂದ್ರೆ ಪುಲಿಕೇಶಿ ನಗರದಲ್ಲಿ ಪ್ರಬಲ ಅಭ್ಯರ್ಥಿಯಾಗಿ ಬೆಳೆದಿದ್ದಾರೆ ಅಖಂಡ ಶ್ರೀನಿವಾಸ್ ಮೂರ್ತಿ. ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ, ಬಹುಮತದಿಂದ ಗೆಲುವು ಕಂಡಿದ್ದರು.
ಅಖಂಡ ಶ್ರೀನಿವಾಸ್ ಮೂರ್ತಿಗೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹ್ಮದ್ ಕೂಡ ಬೆಂಬಲ ಸೂಚಿಸಿದ್ದಾರೆ. ಟೊಕೆಟ್ ನೀಡಲು ಒತ್ತಾಯ ಕೇಳಿ ಬಂದಿದೆ. ಆದರೂ 124ರ ಪಟ್ಟಿಯಲ್ಲಿ ಹೆಸರು ಬಂದಿಲ್ಲ. ಟಿಕೆಟ್ ಸಿಗದೆ ಹೋದರೆ ಮುಂದೆ ಬಿಜೆಪಿ ಪಕ್ಷ ಸೇರುವುದು ಅಥವಾ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆಯೂ ಆಪ್ತರ ಬಳಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…