Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಅಕ್ಕ ಕೆಫೆ ಮತ್ತು ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯ ಉದ್ಘಾಟನೆ

---Advertisement---

ಚಿತ್ರದುರ್ಗ. ಆಗಸ್ಟ್03: ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‍ಆರ್‍ಎಲ್‍ಎಂ)-ಸಂಜೀವಿನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪಂಚಾಯತ್ ವತಿಯಿಂದ “ಅಕ್ಕ ಕೆಫೆ” ಮತ್ತು ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯ ಉದ್ಘಾಟನಾ ಸಮಾರಂಭ ಇದೇ ಆಗಸ್ಟ್ 04ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

 

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್.ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ  ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್, ಸರ್ಕಾರದ ಕಾರ್ಯದರ್ಶಿ ಸಮೀರ್ ಶುಕ್ಲಾ, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿ ಮನೋಜ್ ಕುಮಾರ ಮೀನಾ, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ.ಐ.ಶ್ರೀವಿದ್ಯಾ, ಜಿಲ್ಲಾಧಿಕಾರಿ ವೆಂಕಟೇಶ್ ಟಿ., ಜಿ.ಪಂ. ಸಿಇಒ ಡಾ. ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ ಕುಮಾರ ಬಂಡಾರು ಸೇರಿದಂತೆ ಹಲವು ಅಧಿಕಾರಿಗಳು, ಗಣ್ಯರು ಭಾಗವಹಿಸುವರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment