ದಾವಣಗೆರೆ ಜ.20 : ಮಹಿಳೆಯರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಜೀವನ ರೂಪಿಸಿಕೊಳ್ಳಬೇಕು, ಅವರ ಸ್ವಾವಲಂಬಿ ಬದುಕಿಗೆ ಅಕ್ಕ ಕೆಫೆಯು ಸಹಕಾರಿಯಾಗಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಅವರು ಸೋಮವಾರ ಪಶು ವೈದ್ಯಕೀಯ ಇಲಾಖೆ ಮುಂಭಾಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಹಭಾಗಿತ್ವದಲ್ಲಿ ಮಹಿಳಾ ಸ್ವ-ಸಹಾಯ ಸಂಘದವರು ನಿರ್ವಹಣೆ ಮಾಡುವ ಅಕ್ಕ ಕೆಫೆ ಉದ್ಘಾಟಿಸಿ ಮಾತನಾಡಿದರು.
ಅಕ್ಕ ಕೆಫೆಯನ್ನು ಸ್ವಸಹಾಯ ಗುಂಪಿಗೆ ಸೇರಿದ 14 ಮಹಿಳೆಯರು ನಡೆಸುವರು. ಬೆಳಗ್ಗೆ 6 ರಿಂದ ರಾತ್ರಿ 10 ರ ವರೆಗೆ ವಾರವಿಡಿ ಕಾರ್ಯನಿರ್ವಹಿಸಲಿದೆ. ಇಲ್ಲಿ ಆರೋಗ್ಯಕರ, ಮನೆರುಚಿಯ ಸ್ವಾದಿಷ್ಟ ಆಹಾರ ಲಭ್ಯವಿರಲಿದೆ. ಶುಚಿ-ರುಚಿ ಜತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರ ಪೂರೈಕೆಯಾಗಲಿದೆ ಎಂದರು.
ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ ಉಪಸ್ಥಿತರಿದ್ದರು.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…