ಬೆಂಗಳೂರು: ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಈ ಮೊದಲೇ ದೊಡ್ಡಮಟ್ಟದಲ್ಲಿ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ಮಾಡಿದ್ದರು. ಕಾಂಗ್ರೆಸ್ ನಾಯಕರೆಲ್ಲ ಸೇರಿ ಆ ಹೋರಾಟಕ್ಕೆ ಕೈಜೋಡಿಸಿದ್ದರು. ಇದೀಗ ರಾಹುಲ್ ಗಾಂಧಿ ಅವರು ಆಳಂದ ಕ್ಷೇತ್ರದ ಮತದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇದೀಗ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಾನು ರಾಹುಲ್ ಗಾಂಧಿ ಅವರ ಜೊತೆಗೆ ದೃಢವಾಗಿ ನಿಲ್ಲುತ್ತೇನೆ. ಭಾರತದ ಜನ ಪಾರದರ್ಶಕತೆ, ನ್ಯಾಯ ಸಮ್ಮತತೆಗೆ ಅರ್ಹರು. ಆದರೆ ಮತದಾರರನ್ನು ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಗುಪ್ತ ಕಾರ್ಯಾಚರಣೆಗಳು ನಡೆಯುತ್ತಿವೆ. ಕಾಂಗ್ರೆಸ್ ನ ಬಲಿಷ್ಠ ಬೂತ್ ಗಳಲ್ಲಿ ಕಾನೂನು ಬದ್ಧ ಮತಗಳನ್ನು ಅಳಿಸಲು ಸಾಫ್ಟ್ ವೇರ್, ಹೊರಗಿನವರ ಹಸ್ತಕ್ಷೇಪ ಬಳಕೆ ಆಳಂದ ಕ್ಷೇತ್ರದ ಸಾಕ್ಷಿಗಳಿಂದ ಗೊತ್ತಾಗುತ್ತದೆ.
ಇದು ಆಘಾತಕಾರಿ ಜನರ ಧ್ವನಿಯನ್ನು ಅಡಗಿಸಲು ಉದ್ದೇಶ ಪೂರ್ವಕ ಮತ್ತು ಯೋಜಿತ ಪ್ರಯತ್ನವಾಗಿದೆ. ನಾವೂ ನಮ್ಮ ಧ್ವನಿ ಎತ್ತುವುದನ್ನು, ದಾಖಲೆಗಳನ್ನು ಬಹಿರಂಗಪಡಿಸುವುದನ್ನು ಮುಂದುವರೆಸುತ್ತೇವೆ, ವೋಟ್ ಚೋರಿ ಫ್ಯಾಕ್ಟರಿ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಆಳಂದ ಕ್ಷೇತ್ರದಲ್ಲಿ 2023ರ ಎಲೆಕ್ಷನ್ ವೇಳೆ 6018 ಮತದಾರರನ್ನು ಡಿಲೀಟ್ ಮಾಡಲು ಯತ್ನಿಸಿದ್ದರು. ಬೇರೆ ರಾಜ್ಯಗಳ ಫೋನ್ ನಂಬರ್ ಬಳಕೆ ಮಾಡಲಾಗಿದೆ. ಕಾಂಗ್ರೆಸ್ ವೋಟ್ ಗಳನ್ನೇ ಟಾರ್ಗೆಟ್ ಮಾಡಲಾಗಿದೆ. ಸೂರ್ಯಕಾಂತ್ ಹೆಸರು ಬಳಸಿ 14 ನಿಮಿಷದಲ್ಲಿ 12 ವೋಟ್ ಡಿಲೀಟ್ ಮಾಡಲಾಗಿದೆ. ಕಾಂಗ್ರೆಸ್ ಬಲವಾಗಿರುವ ಬೂತ್ ಗಳನ್ನೇ ಟಾರ್ಗೆಟ್ ಮಾಡಿ, ಮತಗಳ್ಳತನ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಅವರು ನಿನ್ನೆ ಮಾತನಾಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











