Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 03 ರಂದು ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಸಾಹಿತ್ಯಿಕ, ಸಾಂಸ್ಕೃತಿಕ ಕಲೋತ್ಸವ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಸಾಹಿತ್ಯಿಕ, ಸಾಂಸ್ಕೃತಿಕ ಕಲೋತ್ಸವ ಜ.3 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆಅಲೆಮಾರಿ ಹಿಂದುಳಿದ ವರ್ಗಗಳ ಪ್ರವರ್ಗ-1 ಒಕ್ಕೂಟದ ಗೌರವಾಧ್ಯಕ್ಷ ಕೆ.ರವೀಂದ್ರಶೆಟ್ಟಿ ಉಳಿದೊಟ್ಟು ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಅಲೆಮಾರಿ, ಅರೆಅಲೆಮಾರಿ, ಹಿಂದುಳಿದ ವರ್ಗಗಳ 46 ಜಾತಿಗಳ ಸಮಸ್ಯೆ, ಜನಜೀವನ, ಮೂಲಕಸುಬು, ಭಾಷೆ, ಸಂಸ್ಕøತಿ, ಆಚಾರ ವಿಚಾರಗಳನ್ನು ತಿಳಿದುಕೊಳ್ಳುವುದಕ್ಕಾಗಿ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಸಂಚರಿಸಿದಾಗ ಡೇರೆ, ಟೆಂಟು, ಗುಡಿಸಲುಗಳಲ್ಲಿ ಅತ್ಯಂತ ಶೋಚನೀಯವಾಗಿ ಬದುಕುತ್ತಿರುವುದು ಕಂಡು ಬಂದಿತು. ಹಾಗಾಗಿ ಈ ಜನಾಂಗದ ಸಮೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಹೇಳಿದರು.
ಜ.3 ರಂದು ಬೆಳಿಗ್ಗೆ 9 ರಿಂದ ಸಂಜೆಯವರೆಗೆ ಕಲೋತ್ಸವ ನಡೆಯಲಿದೆ.

ಜನಾಂಗದ ಸಾಧಕರು ಹಾಗೂ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಗುವುದು. ರಾಜ್ಯದ ಮುಖ್ಯಮಂತ್ರಿ ಬಸವರಾಜ್‍ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರುಗಳನ್ನು ಆಹ್ವಾನಿಸಿದ್ದೇವೆ. ಅಲೆಮಾರಿ, ಅರೆಅಲೆಮಾರಿ ಜನಾಂಗ ಅಂದು, ಇಂದು, ಮುಂದು ಎನ್ನುವ ಸ್ಥಿತಿಗತಿ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.

ಆನಂದಪ್ಪ ಜ್ಯೋತಿ, ಗುರುಲಿಂಗಪ್ಪ ಇವರುಗಳು ಮಾತನಾಡಲಿದ್ದಾರೆ. ಈ ಜನಾಂಗವನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ಕಳೆದ ಹತ್ತು ವರ್ಷಗಳಿಂದ ಸರ್ಕಾರಿ ಜಾಗದಲ್ಲಿ ಟೆಂಟು, ಗುಡಿಸಲು, ಡೇರೆ ಹಾಕಿಕೊಂಡು ವಾಸ ಮಾಡುತ್ತಿರುವವರ ಹೆಸರಿಗೆ ಜಾಗ ನೀಡಬೇಕು. ಪ್ರತಿ ಜಿಲ್ಲೆಯಲ್ಲೂ ಸಭಾಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಬೇಕು. ರುದ್ರಭೂಮಿಗೆ ಜಾಗ ಕಾಯ್ದಿರಿಸುವಂತೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆಅಲೆಮಾರಿ ಹಿಂದುಳಿದ ವರ್ಗಗಳ ಪ್ರವರ್ಗ-1 ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರತಾಪ್‍ಕುಮಾರ್ ಓ.ಜೋಗಿ ಮಾತನಾಡಿ ಕರ್ನಾಟಕದಲ್ಲಿ ಈ ಜನಾಂಗದವರ ಸ್ಥಿತಿ ತುಂಬಾ ಕಷ್ಟದಲ್ಲಿದೆ. ಅದಕ್ಕಾಗಿ ಜ.3 ರಂದು ಬೆಂಗಳೂರಿನಲ್ಲಿ ಸಾಹಿತ್ಯಿಕ ಸಾಂಸ್ಕøತಿಕ ಕಲೋತ್ಸವ ಆಚರಿಸಿ ಸರ್ಕಾರದ ಗಮನ ಸೆಳೆದು ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿರುವುದರಿಂದ ಮುಂದಿನ ದಿನಗಳಲ್ಲಿ ಈ ಒಕ್ಕೂಟವು ಅಲೆಮಾರಿ, ಅರೆಅಲೆಮಾರಿ ಜನಾಂಗಗಳ ಕಷ್ಟ-ನಷ್ಠಗಳಿಗೆ ಧ್ವನಿಯಾಗಿ ನಿಂತು ಕೆಲಸ ಮಾಡಲಿದೆ ಎಂದು ಹೇಳಿದರು.

ಗೊಲ್ಲ ಸಮಾಜದ ಲಕ್ಷ್ಮಿಕಾಂತ್, ಹೆಳವ ಜನಾಂಗದ ಶಿವಾನಂದಪ್ಪ, ವಿರುಪಾಕ್ಷಪ್ಪ, ಒಕ್ಕೂಟದ ಕಾರ್ಯಾಧ್ಯಕ್ಷೆ ಇಂದಿರಾ ಎಸ್.ಆರ್. ಜೋಗಿ ಸಮುದಾಯದ ತಿಪ್ಪೇಸ್ವಾಮಿ, ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!