ಚಿತ್ರದುರ್ಗ, (ಜು.27) : 2022-23ನೇ ಸಾಲಿನಲ್ಲಿ ಜಿಲ್ಲೆಯ ಫಲಿತಾಂಶವನ್ನು ಸುಧಾರಿಸುವ ನಿಟ್ಟಿನಲ್ಲಿ ಎಲ್ಲಾ ಕಾಲೇಜಿನ ಉಪನ್ಯಾಸಕರು ಟೀಂವರ್ಕ್ ಮಾಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ರಾಜು.ಎನ್ ಹೇಳಿದರು.
ನಗರದ ಸಿಎನ್‍ಸಿ ಪಿಯು ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆ, ಚಿತ್ರದುರ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಭೌತಶಾಸ್ತ್ರ ಫಲಿತಾಂಶ ಪುನಃಶ್ಚೇತನ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳನ್ನು ಅವರುಗಳ ಕಿರುಪರೀಕ್ಷೆ ಹಾಗೂ ಮಧ್ಯವಾರ್ಷಿಕ ಪರೀಕ್ಷೆಯಲ್ಲಿ ತೆಗೆದ ಅಂಕಗಳಿಗನುಸಾರವಾಗಿ 3 ವಿಭಾಗವಾಗಿ ಮಾಡಿಕೊಂಡು ಪ್ರತ್ಯೇಕವಾಗಿ ಬ್ಯಾಚ್‍ಗಳನ್ನು ಮಾಡಿ ಅವರುಗಳಿಗೆ ಸಲಹೆಯನ್ನು ನೀಡುವುದರ ಜೊತೆಗೆ ಪ್ರತ್ಯೇಕವಾಗಿ ಭೋದನೆ ಮಾಡುವುದರ ಜೊತೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದರು.
ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಗಾರಗಳನ್ನು ಮಾಡುವುದರ ಮೂಲಕ ಜಿಲ್ಲೆಯ ಫಲಿತಾಂಶವನ್ನು ರಾಜ್ಯಮಟ್ಟದಲ್ಲಿ ಮೊದಲ ಸ್ಥಾನಗಳಲ್ಲಿ ಬರುವಂತೆ ಫಲಿತಾಂಶ ತರಲು ಎಲ್ಲರೂ ಒಗ್ಗೂಡಿ ಕೆಲಸವನ್ನು ಮಾಡಬೇಕೆಂದು ಸಲಹೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಶಿಪುರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಜು.ಕೆ.ಹೆಚ್ ಇವರು ಭೌತಶಾಸ್ತ್ರ ವಿಷಯದ ಪುನಃಶ್ಚೇತನ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಉಪನ್ಯಾಸಕರು ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಕಾರ್ಯೋನ್ಮುಖರಾಗಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಮಲ್ಲೇಶ್.ಬಿ ಮಾತನಾಡುತ್ತಾ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಕಾರ್ಯಾಗಾರಗಳನ್ನು ಮಾಡುವುದರಿಂದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಸುಧಾರಿಸಬಹುದೆಂದು ಸಲಹೆಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಿಎನ್ ಸಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಬಿ.ನಾಗರಾಜ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉಪನ್ಯಾಸಕರು ಸೂಕ್ತ ಮಾರ್ಗದರ್ಶನ ನೀಡಬೇಕು. ಹಾಗೆಯೇ ವಿದ್ಯಾರ್ಥಿಗಳ ಮಟ್ಟಕ್ಕೆ ಇಳಿದು ಪಾಠವನ್ನು ಮಾಡುವುದರಿಂದ ಜಿಲ್ಲೆಯ ಫಲಿತಾಂಶವನ್ನು ಸುಧಾರಿಸಬಹುದೆಂದು ಸಲಹೆಯನ್ನು ನೀಡಿದರು.
2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಭೌತಶಾಸ್ತ್ರ ವಿಷಯದಲ್ಲಿ 100/100ಕ್ಕೆ ಅಂಕಪಡೆದ ರಾಜ್ಯದ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ ಕೇವಲ 36 ಅಗಿದ್ದು, ಇದರಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿನಿಯಾದ ಮೇಘನ.ಬಿ.ಆರ್ ಕೂಡ ಭೌತಶಾಸ್ತ್ರ ವಿಷಯದಲ್ಲಿ 100/100ಕ್ಕೆ ಪಡೆದು ನಮ್ಮ ಕಾಲೇಜಿನ ಘನತೆಯನ್ನು ಹೆಚ್ಚಿಸಿದ್ದಾರೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭೌತಶಾಸ್ತ್ರ ವೇದಿಕೆಯ ಅಧ್ಯಕ್ಷರಾದ ಎನ್.ರಂಗಪ್ಪ ಮತ್ತು ಪೂರ್ಣಭೋಧಾಚಾರ್ ಭಾಗವಹಿಸಿದ್ದರು. ಪುನಃಶ್ಚೇತನ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿ.ಪಿ.ಪೂರ್ಣಾನಂದ ಹಾಗೂ ಶ್ರೀ.ಕೆ.ಹೆಚ್.ರಾಜು, ಎನ್.ರಂಗಪ್ಪ ಇವರುಗಳು ಭಾಗವಹಿಸಿದ್ದರು. ಉಪನ್ಯಾಸಕರ ಆರ್.ಸಚಿನ್ ಬಾಬು ಅಂಗ್ಲಭಾಷಾ ವಿಷಯದ ಉಪನ್ಯಾಸಕರು ಕಾರ್ಯಕ್ರಮದ ನಿರೂಪಣೆಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದ ಸ್ವಾಗತವನ್ನು ಉಪನ್ಯಾಸಕರಾದವಿಶ್ವನಾಥ್ ಅವರು ವಂದನಾರ್ಪಣೆಯನ್ನು ಉಪನ್ಯಾಸಕರಾದ ಉಮೇಶ್.ಎಸ್. ನಡೆಸಿಕೊಟ್ಟರು. ಸಿಎನ್‍ಸಿ ಕಾಲೇಜಿನ ಉಪಪ್ರಾಂಶುಪಾಲರಾದ ಮಂಜುನಾಥ್.ಹೆಚ್.ಪಿ ಹಾಗೂ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶಶಿಧರ್.ಕೆ ಇವರು ಕಾರ್ಯಕ್ರಮದ ಉಸ್ತುವಾರಿಯನ್ನು ವಹಸಿಕೊಂಡಿದ್ದರು.
ಪ್ರಾರ್ಥನೆಯನ್ನು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ವೈಷ್ಣವಿ, ಚಂದನ ಆತ್ರೇಯಸಾ, ಸಂಜನಾ ಗೌಡ ಇವರುಗಳು ನಡೆಸಿಕೊಟ್ಟರು.