Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಕಾಶವಾಣಿ: ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಫೆ.18: ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ರಾಯಚೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಫೆ.28 ಅರ್ಜಿ ಸಲ್ಲಿಸಲು ಕೊನೆಯ ದಿನ.

 

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಡಿಪ್ಲೊಮಾ / ಪತ್ರಿಕೋದ್ಯಮ / ಸಮೂಹ ಮಾಧ್ಯಮದಲ್ಲಿ ಪದವಿ ಅಥವಾ ಯಾವುದೇ ಪದವಿಯೊಂದಿಗೆ ಮಾಧ್ಯಮದಲ್ಲಿ ಎರಡು ವರ್ಷಗಳ ಅನುಭವ. ವಯೋಮಿತಿ 24 ರಿಂದ 50 ವರ್ಷ (ಅರ್ಜಿ ಸಲ್ಲಿಸುವ ಕೊನೆಯ ದಿನಕ್ಕೆ ಸರಿಯಾಗಿ), ಅರ್ಜಿದಾರರು ಅರ್ಜಿ ಸಲ್ಲಿಸುವ ಜಿಲ್ಲೆಯ ಜಿಲ್ಲಾ ಕೇಂದ್ರದ ನಿವಾಸಿಯಾಗಿರಬೇಕು. ಅಥವಾ ಕೇಂದ್ರದಿಂದ 10 ಕಿ.ಮೀ. ಒಳಗಿನ ನಿವಾಸಿಯಾಗಿರಬೇಕು. ಕಂಪ್ಯೂಟರ್ ಮತ್ತು ವರ್ಡ್ ಪ್ರಾಸೆಸಿಂಗ್‍ನಲ್ಲಿ ಜ್ಞಾನ ಹೊಂದಿರಬೇಕು. ಸುದ್ದಿ ಸಂಗ್ರಹಕ್ಕೆ ಬೇಕಾದ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಅಗತ್ಯ.

 

ಆಸಕ್ತ ಅಭ್ಯರ್ಥಿಗಳು ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಒಳಗೊಂಡ ಅರ್ಜಿಗಳನ್ನು, ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಇದೇ ಫೆಬ್ರವರಿ 28 ರೊಳಗೆ ತಲುಪುವಂತೆ The Deputy Director General (E) , (Attn: Regional News Unit), Akashvani, Raj Bhavan Road, Bengaluru 560 001  ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 080 – 22356344 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...