Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ : ಧ್ವಜಾರೋಹಣ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 18: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ 13ನೆಯ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ನಿಮಿತ್ತ ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ರಾಷ್ಟ್ರಧ್ವಜಾರೋಹಣವನ್ನು ಜಗದ್ಗುರು ಶ್ರೀ ಮುರುಘರಾಜೇಂದ್ರ ಬೃಹನ್ಮಠ & ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಶಿವಯೋಗಿ ಸಿ ಕಳಸದ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು.

ಸಮ್ಮೇಳನಾಧ್ಯಕ್ಷರ ಮೆರವಣಿಗೆ
ಸಮ್ಮೇಳನಾಧ್ಯಕ್ಷರಾದ ಡಾ. ಸಿದ್ಧರಾಮ ಬೆಲ್ದಾಳ ಶರಣರನ್ನು ಮೆರವಣಿಗೆಯ ಮೂಲಕ ರಾಷ್ಟ್ರೀಯ ಹೆದ್ದಾರಿ-50, ಶಿವಮೊಗ್ಗ ರಸ್ತೆಯಿಂದ ಮುರುಘಾಮಠದ ದ್ವಾರಬಾಗಿಲು ಮುಖಾಂತರ ಮುರುಘಾಮಠ ಆವರಣ, ಮುರುಘಾಶಾಂತವೀರ ಮಹಾದ್ವಾರ, ಎಸ್ ನಿಜಲಿಂಗಪ್ಪ ಮಹಾದ್ವಾರ, ಬಿಚ್ಚುಗತ್ತಿ ಭರಮಣ್ಣನಾಯಕ ಮಹಾದ್ವಾರ, ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಮಹಾದ್ವಾರ ಮುಖಾಂತರ ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ವೇದಿಕೆ ಅನುಭವ ಮಂಟಪಕ್ಕೆ ಕರೆತರಲಾಯಿತು.

ಈ ಸಂದರ್ಭದಲ್ಲಿ ನಾಡೋಜ ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿ ಶ್ರಿ ಎಸ್.ಆರ್. ಗುಂಜಾಳ್, ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಜಗದ್ಗುರು ಪ್ರಸನ್ನಾನಂದ ವಾಲ್ಮೀಕಿ ಸ್ವಾಮಿಗಳು, ಹೆಬ್ಬಾಳು ಶ್ರೀ ರುದ್ರೇಶ್ವರ ವಿರಕ್ತಮಠದ ಶ್ರೀ ಮ.ನಿ.ಪ್ರ. ಮಹಾಂತರುದ್ರೇಶ್ವರ ಮಹಾಸ್ವಾಮಿಗಳು, ರಾವಂದೂರು ಶ್ರೀ ಮುರುಘರಾಜೇಂದ್ರ ವಿರಕ್ತಮಠದ ಶ್ರೀ ಮ.ನಿ.ಪ್ರ. ಸ್ವ. ಮೋಕ್ಷಪತಿ ಸ್ವಾಮಿಗಳು, ಚಿತ್ರದುರ್ಗ ಮಡಿವಾಳ ಮಾಚಿದೇವ ಗುರುಪೀಠದ ಜಗದ್ಗುರು ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಅಥಣಿ ಶ್ರೀ ಗಚ್ಚಿನಮಠದ ಶ್ರೀ ಶಿವಬಸವ ಗುರುಮುರುಘರಾಜೇಂದ್ರ ಸ್ವಾಮಿಗಳು, ಬ್ಯಾಡಗಿ ಶ್ರೀ ಮುಪ್ಪಿನಸ್ವಾಮಿ ವಿರಕ್ತಮಠದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿಗಳು, ಸಿದ್ದಯ್ಯನಕೋಟೆಯ ಶ್ರೀ ಮ.ನಿ.ಪ್ರ. ಬಸವಲಿಂಗ ಸ್ವಾಮಿಗಳು, ಶಿಕಾರಿಪುರ ಶ್ರೀ ಮುರುಘಾಮಠದ ಶ್ರೀ ಚನ್ನಬಸವ ಸ್ವಾಮಿಗಳು, ಮಾಜಿ ಸಚಿವ ಶ್ರೀ ಎಸ್ ಎಸ್ ಪಾಟೀಲ್, ಡಾ.ಬಸವಪ್ರಭುಸ್ವಾಮಿಗಳು, ಡಾ.ಬಸವಕುಮಾರ ಸ್ವಾಮಿಗಳು, ಶ್ರೀ ಎಸ್ ಎನ್ ಚಂದ್ರಶೇಖರ್, ಹರಚರ-ಗುರುಮೂರ್ತಿಗಳು, ಶರಣ ಸಾಹಿತ್ಯ ಪರಿಷತ್ ವಿವಿಧ ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕದಳೀ ವೇದಿಕೆ ಪದಾಧಿಕಾರಿಗಳು, ಎಸ್.ಜೆ.ಎಂ.ವಿದ್ಯಾಪೀಠದ ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಶ್ರೀ ತೋಟಪ್ಪ ಉತ್ತಂಗಿ ಶರಣ ಗೀತೆ, ಹುರಳಿ ಬಸವರಾಜ್ ಸ್ವಾಗತಿಸಿ, ಟಿ.ಪಿ.ಜ್ಞಾನಮೂರ್ತಿ ನಿರೂಪಿಸಿದರು.

 

 

ಈ ಸಂದರ್ಭದಲ್ಲಿ ಹರಗುರುಚರಮೂರ್ತಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ವಿವಿಧ ವಿದ್ಯಾಸಂಸ್ಥೆಗಳ ಅಧ್ಯಕ್ಷರು ಶರಣ ಸಾಹಿತ್ಯ ಪರಿಷತ್ ವಿವಿಧ ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕದಳೀ ವೇದಿಕೆ ಪದಾಧಿಕಾರಿಗಳು, ಎಸ್.ಜೆ.ಎಂ.ವಿದ್ಯಾಪೀಠದ ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...