ಎಲ್ಲರಿಗೂ ಮಾನಸಿಕ ಆರೋಗ್ಯದ ತಪಾಸಣೆ ಅಗತ್ಯ : ಸಚಿವ ಸುಧಾಕರ್

 

ಬೆಂಗಳೂರು: ದೇಶದಲ್ಲೇ‌ ಮೊದಲ ಬಾರಿಗೆ ನಿಮ್ಹಾನ್ಸ್ ಸಂಸ್ಥೆಯು ನೀತಿ ಆಯೋಗ ಹಾಗೂ ಆರೋಗ್ಯ ಇಲಾಖೆಯ ನೆರವಿನಲ್ಲಿ ‘ಕರ್ನಾಟಕ ಮೆದುಳು ಆರೋಗ್ಯ ಕಾರ್ಯಕ್ರಮ’ (ಕರ್ನಾಟಕ ಬ್ರೇನ್ ಹೆಲ್ತ್ ಇನೀಶಿಯೇಟಿವ್) ಜಾರಿ ಮಾಡಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಾರ್ಯಕ್ರಮಕ್ಕೆ ವರ್ಚುವಲ್ ಚಾಲನೆ ನೀಡಿದ್ದಾರೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಮ್ಹಾನ್ಸ್ ನಿಂದ ಈ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದು, ಮಾನಸಿಕ ರೋಗಗಳ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುವ ಕುರಿತು ವೈದ್ಯರಿಗೆ ತರಬೇತಿ ನೀಡಲಾಗುತ್ತದೆ. ಜೊತೆಗೆ ರೋಗಿಗಳನ್ನು ಪತ್ತೆ ಮಾಡಿ ಚಿಕಿತ್ಸೆ ನೀಡಲಾಗುತ್ತದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೋವಿಡ್ ಸಂದರ್ಭದಲ್ಲಿ ನಿಮ್ಹಾನ್ಸ್ ನೇತೃತ್ವದಲ್ಲಿ, ಅನೇಕ ಕೊರೊನಾ ರೋಗಿ ಹಾಗೂ ಕುಟುಂಬದವರ ಮಾನಸಿಕ ಆರೋಗ್ಯ ನಿರ್ವಹಣೆಗೆ ಒತ್ತು ನೀಡಲಾಯಿತು. ಕೆಲ ಪ್ರಕರಣಗಳಲ್ಲಿ ಆತ್ಮಹತ್ಯೆಯ ಘಟನೆಯೂ ನಡೆಯಿತು. ಆ ವೇಳೆ ಅನೇಕರಿಗೆ ಮಾನಸಿಕ ಆರೋಗ್ಯ ಆಪ್ತ ಸಮಾಲೋಚನೆ ಸೇವೆ ನೀಡಲಾಯಿತು. ಇದನ್ನು ಇನ್ನಷ್ಟು ಮುಂದುವರಿಸಲಾಗುತ್ತಿದೆ.

ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ. ಮೆದುಳಿನ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿದೆ. ನಿಮ್ಹಾನ್ಸ್, ಜನರ ಬಳಿಯೇ ಹೋಗಿ ಆರೋಗ್ಯ ಸೇವೆ ನೀಡುವಂತಹ ಪ್ರತಿಷ್ಠಿತ ಸಂಸ್ಥೆಯಾಗಿದೆ. ಸಾಮಾನ್ಯ ಫಿಸಿಶೀಯನ್ ಕೂಡ ಮಾನಸಿಕ ಆರೋಗ್ಯ ಸೇವೆ ನೀಡುವಂತೆ ನಿಮ್ಹಾನ್ಸ್ ತರಬೇತಿ ನೀಡಲಿದೆ ಎಂದರು.

ನವಜಾತ ಶಿಶುವಿಗೂ ಮಾನಸಿಕ ಆರೋಗ್ಯದ ತಪಾಸಣೆ ಮಾಡಿ ರೋಗ ಪತ್ತೆ ಮಾಡುವ ಅಗತ್ಯವಿದೆ. ಸಾಮಾಜಿಕ ಪರಿಸ್ಥಿತಿ, ಕೌಟುಂಬಿಕ ಸ್ಥಿತಿ ಮೊದಲಾದ ಕಾರಣಗಳಿಂದ ಅನೇಕರು ಮಾನಸಿಕ ಒತ್ತಡದಿಂದ ಬಳಲುತ್ತಾರೆ. ಇದು ಪ್ರತಿ ದಿನದ ಚಟುವಟಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಹೆಚ್ಚು ಮಾನಸಿಕ ಆರೋಗ್ಯ ತಜ್ಞರು ರಾಜ್ಯಕ್ಕೆ ಬೇಕಾಗಿದೆ. ರಾಜ್ಯದಲ್ಲಿ ಸುಮಾರು 2 ಲಕ್ಷ ಮಂದಿ ವೈದ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಇವರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

53 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago