Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2ನೇ ಬಾರಿ ಸಿಎಂ ಆಗಿದ್ದಕ್ಕೆ ಇವರಿಗೆಲ್ಲ ಹೊಟ್ಟೆ ಉರಿ : ವಿಪಕ್ಷಗಳಿಗೆ ಸಿದ್ದರಾಮಯ್ಯ ತಿರುಗೇಟು

---Advertisement---

ಮೈಸೂರು: ರಾಜ್ಯದಲ್ಲಿ ಸದ್ಯ ವಾಲ್ಮೀಕಿ ನಿಗಮ ಅಭಿವೃದ್ಧಿಯ ಬಹುಕೋಟಿ ಹಗರಣ ಹಾಗೂ ಮೂಡಾ ಹಗರಣದ ವಿಚಾರ ಸದ್ದು ಮಾಡುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕರೆಲ್ಲಾ ಸಿಎಂ ಸಿದ್ದರಾಮಯ್ಯ ಅವರ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ವಿಪಕ್ಷಗಳ ಆರೋಪಕ್ಕೆ ಸಿಎಂ ಕೂಡ ತಿರುಗೇಟು ನೀಡಿದ್ದು, ನಾನು ಎರಡನೇ ಬಾರಿಗೆ ಸಿಎಂ ಆಗಿದ್ದನ್ನು ಇವರಿಂದ ಸಹಿಸುವುದಕ್ಕೆ ಆಗುತ್ತಿಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದುಳಿದ ಸಮುದಾಯದ ನಾನು ಎರಡನೇ ಬಾರಿಗೆ ಸಿಎಂ ಆಗಿದ್ದನ್ನು ಇವರಿಂದ ಸಹಿಲಾಗುತ್ತಿಲ್ಲ. ನನ್ನ ಮೇಲೆ ಇವರಿಗೆಲ್ಲಾ ಹೊಟ್ಟೆ ಉರಿ. ಅದಕ್ಕೆ ಹೀಗೆಲ್ಲಾ ಆರೋಪ ಮಾಡುತ್ತಿದ್ದಾರೆ. ನನ್ನ ವಿರುದ್ಧ ಆರೋಪ ಮಾಡುವುದಕ್ಕೆ ಅವರುಗೆ ಬೇರೆ ಏನು ಇಲ್ಲ. ಮೂಡಾ ವಿಚಾರವನ್ನು ಎಳೆದು ತರುತ್ತಿದ್ದಾರೆ. ರಾಜಕೀಯವಾಗಿ ಉತ್ತರ ಕೊಡಲು ನಮಗು ಗೊತ್ತಿದೆ. ಮೂಡಾ ಹಗರಣದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ‌. ಅವರು ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ರಾಜಕೀಯ ಮಾಡುವುದಾದರೆ ನಾವೂ ರಾಜಕೀಯವಾಗಿ ಎದುರಿಸುತ್ತೇವೆ. ನೋಡ್ತಾ ಇರಿ ರಾಜಕೀಯವಾಗಿ ಅದಕ್ಕೆ ಉತ್ತರ ಕೊಡುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಈಗಾಗಲೇ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅದೆಲ್ಲದರ ತನಿಖೆಯಾಗಬೇಕಿದೆ. ಇನ್ನು ಮೂಡಾ ಸೈಟುಗಳ ಹಂಚಿಕೆಯ ವಿಚಾರಕ್ಕೆ ವಿಪಕ್ಷಗಳು ವಾಗ್ದಾಳಿ ನಡೆಸುತ್ತಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment