ಬೆಂಗಳೂರು: ರಾಜ್ಯಾದ್ಯಂತ PSI, SDPI ಮುಖಂಡರ ಮನೆ ಮೇಲೆ ದಾಳಿ ನಡೆಸುತ್ತಿದೆ. ತುಮಕೂರು ಪಿಎಫ್ಐ ಜಿಲ್ಲಾಧ್ಯಕ್ಷನಿಗೆ ನ್ಯಾಯಾಂಗ ಬಂಧನವಾಗಿದೆ. ಅಕ್ಟೋಬರ್ 2ರವರೆಗೂ ರೆಹಾನ್ ನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ತಹಶೀಲ್ದಾರ್ ಈ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ತುಮಕೂರು ಎಸ್ಪಿ ರಾಹುಲ್ ಮಾಹಿತಿ ನೀಡಿದ್ದಾರೆ.
ರಾಜ್ಯದ ಹಲವೆಡೆ ಪಿಎಫ್ಐ ಮುಖಂಡರ ಮನೆ ಮೇಲೆ ದಾಳಿ ನಡೆಯುತ್ತಿರುವ ಹಿನ್ನೆಲೆ, ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಹಲವೆಡೆ ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತ ಕ್ರಮವಾಗಿ ಅವರನ್ನೆಲ್ಲಾ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಎನ್ಐಎ ದಾಳಿ ವೇಳೆ ಹಲವರಿಂದ ಆತಂಕ ಸೃಷ್ಟಿಗೆ ಯತ್ನ ನಡೆದಿದೆ. ಕಾನುಜನು ಸುವ್ಯವಸ್ಥೆಗೆ ಧಕ್ಕೆಯಾಗಬಾರದೆಂದು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.