Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾ ಮೇಲ್ದಂಡೆ ಯೋಜನೆ ರೂ.5,300 ಕೋಟಿ ಅನುದಾನ ಬಿಡುಗಡೆ ಕೋರಿ ಸರ್ವ ಪಕ್ಷ ನಿಯೋಗದಿಂದ ಪ್ರಧಾನ ಮಂತ್ರಿ ಭೇಟಿ

ಡಿಕೆ ಶಿವಕುಮಾರ್
---Advertisement---

ಬೆಳಗಾವಿ ಸುವರ್ಣ ವಿಧಾನಸೌಧ ಡಿ. 09 :

ಪ್ರಸಕ್ತ ಸಂಸತ್ತಿನ ಅಧಿವೇಶನದ ಮುಗಿಯುವುದರ ಒಳಗಾಗಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಘೋಷಿಸಿರುವ ರೂ.5,300 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸರ್ವಪಕ್ಷಗಳ ನಿಯೋಗದೊಂದಿಗೆ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

 

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಶಾಸಕ ಟಿ.ಬಿ.ಜಯಚಂದ್ರವರ ಗಮನ ಸೆಳಯುವ ಸೂಚನೆಗೆ ಉತ್ತರಿಸಿ ಅವರು ಮಾತನಾಡಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು. ಇದಕ್ಕೆ ಸಂಸತ್ತಿನ ಅನುಮೋದನೆ ದೊರೆತಿದೆ. ಇದನ್ನು ಆಧರಿಸಿ ರಾಜ್ಯ ಸರ್ಕಾರದ ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯ ಬಜೆಟ್‍ನಲ್ಲಿ ಅನುದಾನವನ್ನು ಮೀಸಲಿರಿದ್ದರು. ಸರ್ಕಾರ ಬದಲಾವಣೆಯಾದ ನಂತರ ಕೇಂದ್ರ ಸರ್ಕಾರ ಅನುದಾನ ಬಿಡಗಡೆ ನಿಲ್ಲಿಸಿದೆ. ಆದರೂ ರಾಜ್ಯ ಸರ್ಕಾರ ವಿಸ್ತøತ ಯೋಜನೆ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿದೆ. ಅನುದಾನ ಕಡತ ಪ್ರಧಾನಮಂತ್ರಿ ಕಚೇರಿಯಲ್ಲಿದೆ ಎಂಬ ಉತ್ತರಗಳು ಕೇಳಿಬಂದಿವೆ. ಈ ಹಿನ್ನಲೆಯಲ್ಲಿ ವೈಯಕ್ತಿಯವಾಗಿ ಪ್ರಧಾನಮಂತ್ರಿಗಳನ್ನು ಭೇಟಿಯಾದಾಗಲೂ ಅನುದಾನ ಬಿಡುಗಡೆ ಮಾಡುವಂತೆ ಪ್ರಸ್ತಾಪಿಸಿದ್ದೇನೆ. ಈ ಹಿಂದೆ ರಾಜ್ಯ ಸರ್ಕಾರ ನಿಯೋಗ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುವ ವೇಳೆ, ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು, ಆಹಾರ ಸರಬರಾಜು ಹಾಗೂ ನವೀಕರಣ ಸಂಪನ್ಮೂಲ ಇಂಧನ ಸಚಿವ ಪ್ರಲ್ಹಾದ್ ಜೋಶಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ಸಹ ನಿಯೋಗದಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದೆ, ಆದರೆ ಉಭಯ ಸಚಿವರು ಸಮಯಾವಕಾಶ ಕೊರತೆ ಹಿನ್ನಲೆಯಲ್ಲಿ ನಿಯೋಗದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದರು. ಪ್ರಸ್ತುತ ಸಂಸತ್ತಿನ ಅಧಿವೇಶನದ ಸಮಯದಲ್ಲಿಯೇ ಮೊತ್ತೊಮ್ಮೆ ಸರ್ವಪಕ್ಷಗಳ ನಿಯೋಗದೊಂದಿಗೆ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಲು ಪ್ರಯತ್ನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

 

ಆರಂಭದಲ್ಲಿ ರೂ.2,800 ಕೋಟಿ ಇದ್ದ ಭದ್ರಾ ಮೇಲ್ದಂಡೆ ಯೋಜನೆಯ ವೆಚ್ಚ ಇಂದು ರೂ.28,000 ಕೋಟಿಗೆ ಏರಿಕೆಯಾಗಿದೆ. ರಾಜ್ಯ ಸರ್ಕಾರ ರೂ.22,000 ಕೋಟಿ ಬಂಡವಾಳವನ್ನು ನೀರಾವರಿ ಯೋಜನೆಗಳಿಗೆ ಮೀಸಲಿರಿಸಿದೆ. ಆದರೆ ರಾಜ್ಯದಲ್ಲಿ ರೂ.1.25 ಲಕ್ಷ ಕೋಟಿ ಮೊತ್ತದ ನೀರಾವರಿ ಕಾಮಗಾರಿಗಳು ಚಾಲ್ತಿಯಲ್ಲಿವೆ. ಯೋಜನೆಗಳಿಂದಾಗಿ ಸರ್ಕಾರದ ಮೇಲೆ ಹೊರೆ ಹೆಚ್ಚಾಗಿದೆ. ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಶೇ.10 ರಷ್ಟು ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಹಂತ ಹಂತವಾಗಿ ತನ್ನ ಆಯವ್ಯಯದಲ್ಲಿ ನೀರಾವರಿ ಯೋಜನೆಗಳಿಗೆ ಅನುದಾನ ಮೀಸಲು ಇರಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now