Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿಗಾಗಿ ಸರ್ವಪಕ್ಷ ಸಭೆ ಆರಂಭ : ಸಭೆಗೆ ಗೈರಾದವರು ಯಾರು ?

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಮಳೆ ಬರುವಿಕೆಗಾಗಿಯೇ ಕಾಯುತ್ತಿದ್ದಾರೆ. ಸದ್ಯ ಡ್ಯಾಂಗಳಲ್ಲಿ ಇರುವ ನೀರನ್ನೇ ಗಟ್ಟಿ ಎನ್ನಲಾಗಿದೆ. ಅದರ ಜೊತೆಗೆ ಡ್ಯಾಂನಲ್ಲೂ ದಿನೇ ದಿನೇ ನೀರು ಕಡಿಮೆಯಾಗ್ತಾ ಇದೆ. ಹೀಗಿರುವಾಗ ಪ್ರತಿದಿನ ದಿನ ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಎಷ್ಟು ಸರಿ ಎಂಬ ಪ್ರಶ್ನೆ ಎದುರಾಗಿದೆ. ರಾಜ್ಯ ಸರ್ಕಾರದ ನಡೆಯನ್ನು ರೈತರು, ಬಿಜೆಪಿ ನಾಯಕರು ಖಂಡಿಸಿದ್ದಾರೆ.

ಈ ಸಂಬಂಧ ಇಂದು ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧಸಭೆ ಆರಂಭವಾಗಿದೆ. ಇನ್ನು ಈ ಸಭೆಯಲ್ಲಿ ಕಾವೇರಿ, ಮೇಕೆದಾಟು, ಮಹಾದಾಯಿ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಮಾಜಿ ಸಿಎಂ ಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಅವರು ಪಾಲ್ಗೊಂಡಿದ್ದಾರೆ.

ಅದರ ಜೊತೆಗೆ ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಜಗ್ಗೇಶ್ ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು, ಸಂಸದರು ಭಾಗಿಯಾಗಿದ್ದಾರೆ.

ಆದ್ರೆ ಇದು ಸರ್ವಪಕ್ಷಗಳ ಸಭೆಯಾದರೂ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಿರ್ಮಲಾ ಸೀತಾರಾನ್, ಎ ನಾರಾಯಣ ಸ್ವಾಮಿ, ರಾಜೀವ್ ಚಂದ್ರಶೇಖರ್ ಗೈರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲಾರಿಗೆ ಬೈಕ್ ಡಿಕ್ಕಿ : ಓರ್ವ ಸಾವು…!

    ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಜೂನ್.22 :  ಚಲಿಸುತ್ತಿದ್ದ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಬೈಕ್

ಬಂಧನದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ: ಅಭಿಮಾನಿಗಳಿಗೆ ದರ್ಶನ್ ಹೇಳಿದ್ದೇನು..?

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಸುಲಭವಾಗಿ ಟ್ರ್ಯಾಕ್ ಆಗಿದೆ. ಕಳೆದ 12 ದಿನದಿಂದ ಪೊಲೀಸ್ ಕಸ್ಟಡಿಯಲ್ಲಿದ್ದರು. ಹೈಪ್ರೊಫೈಲ್ ಕೇಸ್ ಆಗಿದ್ದರಿಂದ ಸರ್ಕಾರ ಕೂಡ ಯಾವುದೇ ವಿಚಾರಗಳಿಗೂ ಗಮನ

ನೊಂದ ಜೀವಿಗಳಿಗೆ ಯೋಗ ಒಂದು ವರದಾನ : ಮಹದೇವಿ.ಎಂ. ಮರಕಟ್ಟಿ

  ಸುದ್ದಿಒನ್, ಚಿತ್ರದುರ್ಗ, ಜೂನ್.22 : ನೊಂದ ಜೀವಿಗಳಿಗೆ ಯೋಗ ಒಂದು ವರದಾನವಾಗಿದೆ. ಧ್ಯಾನಾಸಕ್ತ ಚಟುವಟಿಕೆಗಳು ಮನಸ್ಸಿಗೆ ಏಕಾಗ್ರತೆ, ನೆಮ್ಮದಿ, ಶಾಂತಿಯನ್ನು ನೀಡುತ್ತದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕಿ ಮಹದೇವಿ.ಎಂ. ಮರಕಟ್ಟಿ ತಿಳಿಸಿದರು. ಚಿನ್ಮಯ

error: Content is protected !!