Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಸೂರಿನ ನೆಚ್ಚಿನ ಕಣಿಯನಹುಂಡಿ ಗ್ರಾಮದ ತೋಟದಲ್ಲೇ ಗಾಯಕಿ ಎಸ್. ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

---Advertisement---

ಮೈಸೂರು: ದಕ್ಷಿಣ ಭಾರತದ ಖ್ಯಾತ ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.

ಮೈಸೂರು ಜಿಲ್ಲೆಯ ಕಣಿಯನಹುಂಡಿ ಗ್ರಾಮದಲ್ಲಿ ಇಂದು ಸಂಜೆ 5:30ರ ಒಳಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿವಿಧಾನಗಳು ನೆರವೇರಲಿವೆ. ತಮ್ಮ ಸುಮಧುರ ಕಂಠದಿಂದ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಜಾನಕಿಯಮ್ಮ, ತಮ್ಮ ಕೊನೆಯ ದಿನಗಳನ್ನು ಕಣಿಯನಹುಂಡಿ ಗ್ರಾಮದಲ್ಲಿ ಕಳೆಯಬೇಕೆಂಬ ದೊಡ್ಡ ಆಸೆ ಹೊಂದಿದ್ದರು. ಇದೇ ಕಾರಣಕ್ಕಾಗಿ ಅವರು ಅಲ್ಲಿ ಎರಡು ಎಕರೆ ಜಮೀನನ್ನು ಖರೀದಿಸಿದ್ದರು.

ಅಲ್ಲದೆ, ತಮ್ಮ ನಿಧನದ ನಂತರ ಇದೇ ನೆಚ್ಚಿನ ತೋಟದ ಆವರಣದಲ್ಲೇ ಅಂತ್ಯಸಂಸ್ಕಾರ ಮಾಡಬೇಕೆಂದು ಅವರು ಇಚ್ಛಿಸಿದ್ದರು. ಇದೀಗ ಅವರ ಕೊನೆಯ ಆಸೆಯಂತೆಯೇ ಅದೇ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಹಾಗೂ ಜಿಲ್ಲಾಡಳಿತ ನಿರ್ಧರಿಸಿದೆ. ಪ್ರಸ್ತುತ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಜೆಸಿಬಿ ಯಂತ್ರಗಳ ಸಹಾಯದಿಂದ ತೋಟದ ಜಾಗವನ್ನು ಸಮತಟ್ಟುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.

Join WhatsApp

Join Now

Join Telegram

Join Now