ಬೆಂಗಳೂರು: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಮೇಲೆ ಕುಮಾರಸ್ವಾಮಿ ಅವರು ಕೇಂದ್ರದ ಸಚಿವರಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಈ ಸಂಬಂಧ ವ್ಯಂಗ್ಯವಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರವಿರುವ ಏಕೈಕ ಕಾರಣಕ್ಕೆ ಕಳೆದ ಎರಡೂವರೆ ವರ್ಷಗಳಿಂದ ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ರಾಜ್ಯದ ಮೇಲೆ ದ್ರೋಹ ಎಸಗುತ್ತಿದೆ ಎಂದಿದ್ದಾರೆ.
ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆಯಲ್ಲಿ ನ್ಯಾಯಯುತ ಪಾಲು ನೀಡದೆ ವಂಚಿಸುತ್ತಿರುವುದಲ್ಲದೆ, ಕರ್ನಾಟಕದ ನೀರಾವರಿ, ರೈಲ್ವೆ, ಹೆದ್ದಾರಿ ಸೇರಿದಂತೆ ಎಲ್ಲಾ ತೆರನಾದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಮತ್ತು ಅನುಮತಿ ನೀಡದೆ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿಗೆ ಮತ ನೀಡದಿದ್ದರೆ ಮೋದಿಯವರ ಆಶೀರ್ವಾದದಿಂದ ವಂಚಿತರಾಗುತ್ತೀರಿ ಎನ್ನುವ ಬೆದರಿಕೆ ಒಡ್ಡಿದ್ದ ಬಿಜೆಪಿ ನಾಯಕ ಜೆಪಿ ನಡ್ಡಾ ಅವರ ಹೇಳಿಕೆಯನ್ನು ಅಕ್ಷರಶಃ ಕೇಂದ್ರ ಸರ್ಕಾರ ಕಾರ್ಯರೂಪಕ್ಕೆ ತಂದಂತಿದೆ.
ಬಿಜೆಪಿ ಪಕ್ಷದಿಂದ ಗೆದ್ದು ಸಂಸದರು ಮತ್ತು ಕೇಂದ್ರದಲ್ಲಿ ಮಂತ್ರಿಗಳು ಆಗಿರುವವರಿಗೆ ಪ್ರಧಾನಿಗಳ ಎದುರು ಈ ಮಲತಾಯಿ ಧೋರಣೆಯ ವಿರುದ್ಧ ಮಾತನಾಡುವ ಧೈರ್ಯವಾಗಲಿ, ಮತನೀಡಿದ ಜನರ ಬಗ್ಗೆ ಕಾಳಜಿಯಾಗಲಿ ಯಾವುದೂ ಇಲ್ಲ. ಮೈಕ್ ಮುಂದೆ ಏರುದನಿಯಲ್ಲಿ ದ್ವೇಷ ಬಿತ್ತುವ ಇವರಿಗೆ ಮೋದಿಯವರನ್ನು ಕಂಡೊಡನೆ ಕೈಕಾಲು ನಡುಗುತ್ತದೆ.
ಕನ್ನಡಿಗರಿಗೆ ಇಷ್ಟೆಲ್ಲಾ ಅನ್ಯಾಯಗಳು ಆಗುತ್ತಿದ್ದರೂ ಅದರ ವಿರುದ್ಧ ದನಿಯೆತ್ತದೆ ಕೇವಲ ಸ್ವಹಿತಕ್ಕಾಗಿ ಕೇಂದ್ರ ಸರ್ಕಾರದ ಅಡಿಯಾಳಿನಂತೆ ವರ್ತಿಸುತ್ತಿರುವ ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್ ಮತ್ತು ಅದರ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಡೆ ಅಸಹ್ಯ ಹುಟ್ಟಿಸುವಂತಿದೆ. ಒಂದು ಸಚಿವ ಸ್ಥಾನಕ್ಕಾಗಿ ಇಷ್ಟೆಲ್ಲಾ ನಡುಬಗ್ಗಿಸಿ ನಿಲ್ಲಬೇಕೇ? ಇದು ನನ್ನೊಬ್ಬನ ಪ್ರಶ್ನೆ ಅಲ್ಲ, ನೊಂದ ಕನ್ನಡಿಗರೆಲ್ಲರ ಪ್ರಶ್ನೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











