ಕಾಂಗ್ರೆಸ್ ಸೇರಿದವರೆಲ್ಲ ಮತ್ತೆ ವಾಪಾಸ್ ಬರುತ್ತಾರೆ : ಜಗದೀಶ್ ಶೆಟ್ಟರ್

suddionenews
1 Min Read

ಹುಬ್ಬಳ್ಳಿ: ಇತ್ತಿಚೆಗಷ್ಟೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ದಿಢೀರನೇ ಪಕ್ಷ ಬದಲಾವಣೆ ಮಾಡಿಕೊಂಡಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗಲ್ಲ ಅಂತ ಹೇಳಿ ಕಾಂಗ್ರೆಸ್ ನಿಂದಾನೂ ಸ್ಪರ್ಧಿಸಿ ಸೋಲು ಕಂಡಿದ್ದರು. ಇದೀಗ ದಿಢೀರನೇ ಮತ್ತೆ ಮರಳಿ ಗೂಡು ಸೇರಿದ್ದಾರೆ. ಈಗ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಬೇರೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಸೇರುವುದಕ್ಕೆ ಆಸೆ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನ ಬಹಳಷ್ಟು‌ ಜನ ನನ್ನ ಸಂಪರ್ಕದಲ್ಲಿದ್ದಾರೆ. ಅವರೆಲ್ಲಾ ಶೀಘ್ರವೇ ಬಿಜೆಪಿ ಸೇರಲಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದರು ಪಕ್ಷದ ವರ್ಚಸ್ಸು ಬೆಳೆಯುತ್ತಿಲ್ಲ. ಹೀಗಾಗಿಯೇ ಕಾಂಗ್ರೆಸ್ ತೊರೆಯಲು ಅಲ್ಲಿನವರು ಮನಸ್ಸು ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಭಾಗ್ಯಗಳು ಇರಲ್ಲ ಎಂಬುದು ಪರಿಸ್ಥಿತಿಯಿಂದ ಗೊತ್ತಾಗುತ್ತಿದೆ. ಈ ವಿಚಾರವಾಗಿ ಬಾಲಕೃಷ್ಣ ಅವರು ಹೇಳಿದ ಹೇಳಿಕೆ ಶಾಕ್ ಎನಿಸಿದೆ.

ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಅದೇ ನಮ್ಮ ಗುರಿಯಾಗಿದೆ. ಪಕ್ಷ ಕೊಡುವ ಯಾವುದೇ ಜವಬ್ದಾರಿಯಾದರೂ ಸರಿ ಅದನ್ನು ನಿಭಾಯಿಸುತ್ತೇನೆ. ಪಕ್ಷ ಹೇಳಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಸಿದ್ದ. ಬಿಜೆಪಿಯ ವರಿಷ್ಠರು ಗೌರವಯುತ ಸ್ಥಾನ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದಿದ್ದಾರೆ.

 

ಇನ್ನು ಬಜೆಟ್ ವಿಚಾರವಾಗಿ ಮಾತನಾಡಿದ ಅವರು, ನಿರ್ಮಲಾ ಸೀತರಾಮನ್ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ ರೈತರ ಕ್ಷೇಮಾಭಿವೃದ್ಧಿ, ಬಡವರ ಕಲ್ಯಾಣ, ಮಹಿಲಕೆಯರ ಅಭಿವೃದ್ಧಿಗೆ ಪೂರಕವಾಗಿದೆ. ಸ್ಕಿಲ್ ಇಂಡಿಯಾ, ಆಯುಷ್ಮಾನ್ ಭಾರತ, ರಾಷ್ಟ್ರೀಯ ಶಿಕ್ಷಣ ನೀತಿಗೆ ಆದ್ಯತೆ ಕೊಟ್ಟಿದ್ದಾರೆ. ಎಲ್ಲಾ ರಾಜ್ಯಗಳಿಗೆ ಆಗಿರುವ ರೀತಿ ಕರ್ನಾಟಕಕ್ಕೂ ಅನುದಾನದ ಹಂಚಿಕೆಯಾಗಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *