ಚಾಮರಾಜನಗರ: ಬಿಜೆಪಿಯಿಂದ ಜನ ಸ್ವರಾಜ್ ಸಮಾವೇಶ ಶುರುವಾಗಿದೆ. ಇಂದು ಚಾಮರಾಜನಗರದಲ್ಲಿ ನಡೆದ ಜನ ಸ್ವರಾಜ್ ಸಮಾವೇಶದಲ್ಲಿ ಸಚಿವ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಭಾಷಣದುದ್ಧಕ್ಕೂ ಸಿದ್ದರಾಮಯ್ಯ ಹೆಸರೇಳಿ ಕಿಡಿಕಾರಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಎಲ್ಲರೂ ಸೇರಿಕೊಂಡು ಸಿದ್ದರಾಮಯ್ಯ ಅವರನ್ನ ಸೋಲಿಸುತ್ತಾರೆ. ಬಾದಾಮಿ ಕ್ಷೇತ್ರದಲ್ಲೂ ಸಿದ್ದರಾಮಯ್ಯ ಅವರನ್ನ ಸೋಲಿಸಲು ಜನ ಕಾಯುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಕುರುಬರ ನಾಯಕ ನಾನೇ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದರು. ಸಿಂದಗಿಯಲ್ಲಿ 35 ಸಾವಿರ ಕುರುಬರ ಓಟ್ ಇದೆ. ಆದರೂ ಸಿಂದಗಿಯಲ್ಲಿ ಬಿಜೆಪಿ ಗೆದ್ದಿತು ಎಂದು ಲೇವಡಿ ಮಾಡಿದರು.
ಸುಳ್ಳಿಗೆ ಮತ್ತೊಂದು ಹೆಸರೇ ಸಿದ್ದರಾಮಯ್ಯ. ಕಾಂಗ್ರೆಸ್ ನಲ್ಲಿ ಎರಡು ಗುಂಪುಗಳಿವೆ. ಅದು ಈಗಾಗಲೇ ಜಗಜ್ಜಾಹೀರಾತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜನ ಈಗಾಗಲೇ ದುರಂಕಾರಿ ಕಾಂಗ್ರೆಸ್ ಗೆ ಬುದ್ಧಿ ಕಲಿಸಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಲಸಿಕೆ ಹಾಕಿಸಿಕೊಂಡರೆ ಗಂಡಸ್ತನ ಹೋಗುತ್ತೆ ಅಂತ ಕಾಂಗ್ರೆಸ್ ನವರು ಪ್ರಚಾರ ಮಾಡಿ, ಮತ್ತೆ ಕದ್ದು ಮುಚ್ಚಿ ಅವರೇ ಹಾಕಿಸಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…