Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿ ಪಡೆದಿದ್ದ ಅಲ್ಲಮಪ್ರಭು ಲಿಂಗೈಕ್ಯ..!

---Advertisement---

ಚಿಕ್ಕೋಡಿ: ಅನಾರೋಗ್ಯದ ನಿಮಿತ್ತ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿ ಪಡೆದಿದ್ದ, ಅಲ್ಲಮಪ್ರಭು ಸ್ವಾಮೀಜಿ ಗಳು ಇಂದು ಲಿಂಗೈಕ್ಯರಾಗಿದ್ದಾರೆ. ಅಲ್ಲಮಪ್ರಭು ಸ್ವಾಮಿಗಳು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇಂದು ಲಿಂಗೈಕ್ಯರಾಗಿದ್ದಾರೆ. ಕನ್ನಡ ಮಠದ ಶ್ರೀಗಳ ನಿಧನಕ್ಕೆ ಭಕ್ತ ವೃಂದ ಕಣ್ಣೀರು ಹಾಕುತ್ತಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದಲ್ಲಿ ಕನ್ನಡದ ಮಠವಿದೆ. ಈ ಮಠದಲ್ಲಿಯೇ ಅಲ್ಲಮ ಪ್ರಭು ಸ್ವಾಮೀಜಿಗಳು ಇದ್ದರು. ಅಲ್ಲಮಪ್ರಭು ಸ್ವಾಮೀಜಿಗಳು ಹಲವು ದಶಕಗಳ ಕಾಲ ಕನ್ನಡಕ್ಕಾಗಿ ಹೋರಾಟ ನಡೆಸಿದ್ದಾರೆ. ಹೀಗಾಗಿ ಕನ್ನಡದ ಸ್ವಾಮೀಜಿಗಳು ಎಂದೇ ಖ್ಯಾತಿ ಪಡೆದಿದ್ದಾರೆ.

ಕನ್ನಡದ ಕಾರ್ಯಕ್ರಮಗಳನ್ನು ಮಾಡಿ ಗಮನ ಸೆಳೆದಿದ್ದ ಸ್ವಾಮೀಜಿಗಳು, ಮಠಕ್ಕೂ ಕನ್ನಡ‌ ಮಠ ಎಂದೇ ಹೆಸರಿಟ್ಟಿದ್ದಾರೆ. ಕನ್ನಡ ಮಠದ ಸ್ವಾಮಿಗಳಿಗೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ. ಸ್ವಾಮಿಗಳು ಲಿಂಗೈಕ್ಯರಾ್ ಕಾರಣ, ಭಕ್ತರು ಅಂತಿಮ ದರ್ಶನಕ್ಕಾಗಿ ಮಠದತ್ತ ತೆರಳುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment