ಚಿಕ್ಕೋಡಿ: ಅನಾರೋಗ್ಯದ ನಿಮಿತ್ತ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿ ಪಡೆದಿದ್ದ, ಅಲ್ಲಮಪ್ರಭು ಸ್ವಾಮೀಜಿ ಗಳು ಇಂದು ಲಿಂಗೈಕ್ಯರಾಗಿದ್ದಾರೆ. ಅಲ್ಲಮಪ್ರಭು ಸ್ವಾಮಿಗಳು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇಂದು ಲಿಂಗೈಕ್ಯರಾಗಿದ್ದಾರೆ. ಕನ್ನಡ ಮಠದ ಶ್ರೀಗಳ ನಿಧನಕ್ಕೆ ಭಕ್ತ ವೃಂದ ಕಣ್ಣೀರು ಹಾಕುತ್ತಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದಲ್ಲಿ ಕನ್ನಡದ ಮಠವಿದೆ. ಈ ಮಠದಲ್ಲಿಯೇ ಅಲ್ಲಮ ಪ್ರಭು ಸ್ವಾಮೀಜಿಗಳು ಇದ್ದರು. ಅಲ್ಲಮಪ್ರಭು ಸ್ವಾಮೀಜಿಗಳು ಹಲವು ದಶಕಗಳ ಕಾಲ ಕನ್ನಡಕ್ಕಾಗಿ ಹೋರಾಟ ನಡೆಸಿದ್ದಾರೆ. ಹೀಗಾಗಿ ಕನ್ನಡದ ಸ್ವಾಮೀಜಿಗಳು ಎಂದೇ ಖ್ಯಾತಿ ಪಡೆದಿದ್ದಾರೆ.
ಕನ್ನಡದ ಕಾರ್ಯಕ್ರಮಗಳನ್ನು ಮಾಡಿ ಗಮನ ಸೆಳೆದಿದ್ದ ಸ್ವಾಮೀಜಿಗಳು, ಮಠಕ್ಕೂ ಕನ್ನಡ ಮಠ ಎಂದೇ ಹೆಸರಿಟ್ಟಿದ್ದಾರೆ. ಕನ್ನಡ ಮಠದ ಸ್ವಾಮಿಗಳಿಗೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ. ಸ್ವಾಮಿಗಳು ಲಿಂಗೈಕ್ಯರಾ್ ಕಾರಣ, ಭಕ್ತರು ಅಂತಿಮ ದರ್ಶನಕ್ಕಾಗಿ ಮಠದತ್ತ ತೆರಳುತ್ತಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…