Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿಎಂ, ಡಿಸಿಎಂ ವಿರುದ್ಧ ಶತ್ರು ಭೈರವಿಯಾಗದ ಆರೋಪ : ಕೇರಳ ಸರ್ಕಾರ ಹೇಳಿದ್ದೇನು..?

---Advertisement---

 

ಇತ್ತಿಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಒಂದು ಶಾಕಿಂಗ್ ನ್ಯೂಸ್ ಒಂದನ್ನು ಹೇಳಿದ್ದರು. ಕೇರಳದಲ್ಲಿ ನನ್ನ, ಸಿಎಂ ಹಾಗೂ ಸರ್ಕಾರದ ವಿರುದ್ಧ ಶತ್ತು ಭೈರವಿ ಯಾಗ ಮಾಡುತ್ತಿದ್ದಾರೆ. ಅದನ್ನು ಯಾರು ಮಾಡುತ್ತಿದ್ದಾರೆ, ಅದರಲ್ಲಿ ಯಾರೆಲ್ಲಾ ಭಾಗಿಯಾಗುತ್ತಿದ್ದಾರೆ ಎಂಬ ಮಾಹಿತಿ ನನಗಿದೆ. ನಮ್ಮ ಮನೆ ದೇವರು ನಮ್ಮನ್ನು ಕಾಪಾಡುತ್ತಾರೆ ಎಂದಿದ್ದರು. ಈ ಆರೋಪಕ್ಕೆ ಇದೀಗ ಕೇರಳ ಸರ್ಕಾರ ಸ್ಪಷ್ಟನೆ ನೀಡಿದೆ.

ಈ ಹೇಳಿಕೆ ಕೇರಳದಲ್ಲಿ ಸಂಚಲನ ಸೃಷ್ಟಿಸುತ್ತಿದ್ದಂತೆ ಕೇರಳದ ಸರ್ಕಾರ ಅಲರ್ಟ್ ಆಗಿದೆ. ಬಳಿಕ ತನಿಖೆಯನ್ನು ನಡೆಸಿದೆ. ಕೇರಳ ರಾಜ್ಯ ಗುಪ್ತಚರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಈ ಕುರಿತು ವಿಶೇಷ ತನಿಖಾ ತಂಡ ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಬಳಿ ಓಡಾಡಿ ಮಾಹಿತಿ ಕಲೆ ಹಾಕಿದ್ದಾರೆ. ಶತ್ರು ಭೈರವಿಯಾಗ ನಡೆಸಿ, ಬಲಿ ಏನಾದರೂ ಕೊಟ್ಟಿದ್ದಾರಾ ಎಂಬ ತನಿಖೆಯನ್ನು ನಡೆಸಿದ್ದಾರೆ. ಈ ತನಿಖೆಯ ವರದಿಯನ್ನು ವಿಶೇಷ ತಂಡ, ಕೇರಳದ ಡಿಜಿಪಿಗೆ ತಲುಪಿಸಿದೆ. ಅಂಥ ಯಾವುದೇ ಪ್ರಾಣಿ‌ಬಲಿ ನಡೆದಿಲ್ಲ ಎಂದು ವರದಿಯಲ್ಲಿ ತಿಳಿಸಿದೆ.

ಇನ್ನು ಕೇರಳದ ಸಚಿವರಿಂದಲೂ ಈ ಸಂಬಂಧ ಸ್ಪಷ್ಟನೆ ನೀಡಲಾಗಿದೆ. ಕೇರಳದ ದೇವಸ್ವಂ ಬೋರ್ಡ್ ಸಚಿವ ರಾಧಾಕೃಷ್ಣನ್ ಅವರು ಆರೋಪವನ್ನು ನಿರಾಕರಿಸಿದ್ದಾರೆ. ನಮ್ಮ ರಾಜ್ಯದ ಯಾವುದೇ ದೇವಸ್ಥಾನಗಳಲ್ಲೂ ಪ್ರಾಣಿ ಬಲಿ ನಡೆದಿಲ್ಲ ಎಂದು ಸ್ಒಷ್ಟನೆ ನೀಡಿದ್ದಾರೆ. ಪ್ರಾಣಿ ಬಲಿ ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳು ನಡೆದಿಲ್ಲ. ರಾಜರಾಜೇಶ್ವರಿ ದೇವಸ್ಥಾನದ ಹೆಸರಿನ ಬಗ್ಗೆ ಹರಿದಾಡುತ್ತಿರುವ ಸುದ್ದಿ ಶುದ್ಧ ಸುಳ್ಳು ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...