Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಗೋಮಾಂಸಾ ಸಾಗಾಟದ ಆರೋಪ : ದೊಡ್ಡಬಳ್ಳಾಪುರದಲ್ಲಿ ಗೂಡ್ಸ್ ವಾಹನಕ್ಕೆ‌ ಬೆಂಕಿ..!

---Advertisement---

ದೊಡ್ಡಬಳ್ಳಾಪುರ: ಅಕ್ರಮವಾಗಿ ಗೋಮಾಂಸ ಮಾರುತ್ತಿದ್ದಾರೆ ಎಂದು ಆರೋಪಿಸಿ ಗೂಡ್ಸ್ ಗಾಡಿಗೆ ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ನಗರದ ಟಿಬಿ ಸರ್ಕಲ್ ನಲ್ಲಿ ವಾಹಮವನ್ನು ಅಡ್ಡಗಟ್ಟಿದ ಶ್ರೀರಾಮ ಸೇನೆ ಕಾರ್ಯಕರ್ತರು ನಿಂತಿದ್ಸ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ನಾಲ್ಕು ಗೂಡ್ಸ್ ವಾಹನದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು, ವಾಹನಗಳನ್ನು ತಡೆದಿದ್ದಾರೆ. ಈ ವೇಳೆ ವಾಗ್ವಾದ ಶುರುವಾಗಿದೆ. ಈ ವೇಳೆ ಜನ ಕೂಡ ಹಲ್ಲೆ ಮಾಡಲು ಶುರು ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಮಾಂಸ ಸಾಗಾಟ ಮಾಡುತ್ತಿದ್ದ ಗಾಡಿಗೆ ಬೆಂಕಿ ಹಚ್ಚಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಅಗ್ನಿಶಾಮಕ ಶಾಮಕ ಸಿಬ್ಬಂದಿಯನ್ನು ಕರೆಸಿದ್ದಾರೆ‌. ಬೆಂಕಿ ಹತ್ತಿದ್ದ ವಾಹನದಲ್ಲಿ ಬೆಂಕಿ ನಂದಿಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರದಾದ್ಯಂತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಾಡಿ ಹಿಂದೂಪುರದಿಂದ ರಾಜ್ಯ ಹೆದ್ದಾರಿ ಮಾರ್ಗವಾಗಿ ದೊಡ್ಡಬಳ್ಳಾಪುರ ಮೂಲಕ ಬೆಂಗಳೂರಿಗೆ ತಲುಪುತ್ತಾ ಇತ್ತಂತೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ‌ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...