Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವರದಕ್ಷಿಣೆ ಕಿರುಕುಳದ ಆರೋಪ : ನಟಿ ಅಭಿನಯಗೆ 2 ವರ್ಷ ಜೈಲು..!

Facebook
Twitter
Telegram
WhatsApp

 

ಬೆಂಗಳೂರು: ಅಣ್ಣನ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಮೇಲೆ ಚಂದನವನದ ಹಿರಿಯ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆಯಾಗಿದೆ.

ಅನುಭವ ಚಿತ್ರದ ಖ್ಯಾತಿಯ ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ಪ್ರಕಟಿಸಿದೆ. ಅಭಿಯನ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ಆರೋಪದಲ್ಲಿ ಹೈಕೋರ್ಟ್ ಶಿಕ್ಷೆ ಪ್ರಕಟವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ಶಿಕ್ಷೆ ನೀಡಿ ಆದೇಶ ಪ್ರಕಟ ಮಾಡಿದೆ. ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠದಿಂದ ಆದೇಶ ನೀಡಿದೆ.

2002ರಲ್ಲಿ ಲಕ್ಷ್ಮೀದೇವಿ ಎಂಬುವವರು ಅಭಿನಯ ಕುಟುಂಬದ ವಿರುದ್ಧ ದೂರು ದಾಖಲಾಗಿತ್ತು. ವಕೀಲ ಹೆಚ್.ವಿ. ವಿನಾಯಕ್ ಅವರು ಸರ್ಕಾರದ ಪರ ವಾದ ಮಂಡಿಸಿದ್ದಾರೆ. ಲಕ್ಷ್ಮೀದೇವಿ 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಮದುವೆಯಾಗಿದ್ರು. ಮದುವೆ ವೇಳೆ ವರಕ್ಷಿಣೆ ಪಡೆದಿದ್ದಲ್ಲದೆ, ಪದೇ ಪದೇ ಹಣ ತರುವಂತೆ ಟಾರ್ಚರ್ ಮಾಡಿದ್ದಾರಂತೆ. ಮದುವೆ ವೇಳೆ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ರು
ನಂತರವೂ 1 ಲಕ್ಷಕ್ಕೆ ಬೇಡಿಕೆ ಇಟ್ಟು 20 ಸಾವಿರ ಪಡೆದ ನಂತರವೂ ಕಿರುಕುಳ ಆರೋಪ. ಮಾಡಿದ್ದಾರೆ. ವರದಕ್ಷಿಣೆ ಪಡೆದಿದ್ದಲ್ಲದೆ ಲಕ್ಷ್ಮೀದೇವಿ ಅವರನ್ನ ಅವರ ಪೋಷಕರ ಮನೆಯಲ್ಲಿ ಬಿಟ್ಟಿದ್ರು. ಹೆರಿಗೆಗೆ ತವರು ಮನೆಗೆ ಹೋದ ಲಕ್ಷ್ಮೀದೇವಿಯನ್ನ ಮನೆಗೆ ಕರೆತರದೆ ಅಲ್ಲಿಯೇ ಬಿಟ್ಟಿದ್ದರಂತೆ.

ಗಂಡನ ಮನೆಗೆ ಬಂದ ಲಕ್ಷ್ಮೀ ಹಾಗು ಪೋಷಕರಿಗೆ ಅವಮಾನ ಕೂಡ ಮಾಡಿದ್ದರಂತೆ. ಈ ಸಂಬಂಧ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾಲೇಔಟ್ ಠಾಣೆಗೆ ದೂರು ನೀಡಲಾಗಿತ್ತು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ಎಲ್ಲಾ ಐವರು ಆರೋಪಿಗಳಿಗೂ 2012ರಲ್ಲಿ ಕೋರ್ಟ್ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನ ಖುಲಾಸೆಗೊಳಿಸಿ ಆದೇಶಿಸಿತ್ತು.

ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗು ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶ. ಎ1-ಶ್ರೀನಿವಾಸ್ ಹಾಗೂ ಎ-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನಲೆ ಮೂವರಿಗೆ ಜೈಲು ಶಿಕ್ಷೆ. ನಟಿ ಅಭಿನಯ ಅವರ ತಾಯಿ ಎ-3 ಜಯಮ್ಮಗೆ 5 ವರ್ಷ ಕಾರಾಗೃಹ ಶಿಕ್ಷೆ ಪ್ರಕಟವಾಗಿದೆ. ಎ-4 ಚಲುವರಾಜ್, ಎ-5 ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೀಟರ್ ಬಳಸದೆಯೇ‌ಚಳಿಗಾಲದಲ್ಲಿ ಮನೆಯನ್ನು ಬೆಚ್ಚಗಿರುವಂತೆ ಮಾಡಬಹುದು..!

ಈ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಅತ್ಯಧಿಕವಾಗಿ ಸುರಿದ ಪರಿಣಾಮ ಈ ಬಾರಿ ಚಳಿಯೂ ಜಾಸ್ತಿ ಇರಲಿದೆ. ಕಳೆದ ವರ್ಷಕ್ಕಿಂತ ಅತ್ಯಧಿಕವಾಗಿರಲಿದೆ. ಈಗಾಗಲೇ ಚಳಿಗಾಲ ಶುರುವಾಗಿದೆ ಕೂಡ. ಚಳಿಗಾಲದಲ್ಲಿ ಮನೆಯೆಲ್ಲಾ ತಂಪಾಗಿರುತ್ತದೆ. ಕೆಲವೊಬ್ಬರಿಗೆ

ಹರ್ನಿಯಾ ಎಂದರೇನು ? ಸಮಸ್ಯೆಗಳು, ಲಕ್ಷಣಗಳು ಮತ್ತು ಪರಿಹಾರ : ಇಲ್ಲಿದೆ ಸಂಪೂರ್ಣ ಮಾಹಿತಿ…!

ಸುದ್ದಿಒನ್ | ಹರ್ನಿಯಾ ಎನ್ನುವುದು ಹೊಟ್ಟೆಯ ಅಥವಾ ಕಿಬ್ಬೊಟ್ಟೆಯ ಭಾಗದಲ್ಲಿ ಕಂಡುಬರುವ ವೈದ್ಯಕೀಯ ಸ್ಥಿತಿಯಾಗಿದ್ದು, ಹೊಟ್ಟೆಯ ಭಾಗದ ಅಂಗಗಳು ಸ್ನಾಯು ಅಥವಾ ಅಂಗಾಂಗಗಳ ನಡುವೆ ತೂರಿಕೊಂಡು ಚರ್ಮದ ಕೆಳ ಭಾಗದಲ್ಲಿ ಬಲೂನಿನಂತೆ ಊದಿಕೊಂಡು ಅಥವಾ

ಈ ರಾಶಿಯವರು ಶತ್ರುಗಳ ಒಳಸಂಚುಗಳಿಗೆ ಪ್ರತ್ಯುತ್ತರ ನೀಡಿ

ಈ ರಾಶಿಯವರು ಶತ್ರುಗಳ ಒಳಸಂಚುಗಳಿಗೆ ಪ್ರತ್ಯುತ್ತರ ನೀಡಿ, ಈ ರಾಶಿಯವರ ಪರಸ್ತ್ರೀ-ಪುರುಷ ಸಹವಾಸದಿಂದ ಕುಟುಂಬದಲ್ಲಿ ಕಲಹ, ಭಾನುವಾರ- ರಾಶಿ ಭವಿಷ್ಯ ನವೆಂಬರ್-24,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

error: Content is protected !!