ಗಣೇಶ ವಿಸರ್ಜನೆ ವೇಳೆ ದ್ವೇಷ ಭಾಷಣಮಾಡಿದ ಆರೋಪದ ಮೇಲೆ ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಭಾಷಣ ಮಾಡಿದ ಆರೋಪ ಕೇಳಿ ಬಂದಿದೆ.
‘ಶಿವಮೊಗ್ಗದಲ್ಲಿ ನಡೆದ ಈದ್ ಮಿಲಾದ್ ಗಲಾಟೆಯಲ್ಲಿ ಮುಸ್ಲಿಮರು ಹಿಂಸಾಚಾರ ನಡೆಸಿದ್ದಾರೆ. ನಾವೂ ಮುಸ್ಲಿಮರ ಮೇಲೆ ದಾಳಿ ಮಾಡುತ್ತೇವೆ. ಮತ್ತೊಂದು ಗೋದ್ರಾ ಗಲಾಟೆಯಾಗುತ್ತದೆ’ ಎಂದು ದ್ವೇಷ ಭಾಷಣ ಮಾಡಿದ್ದಾರೆ. ಇದೊಂದೆ ಬಾರಿ ಅಲ್ಲ ಸಿದ್ದಲಿಂಗ ಸ್ವಾಮಿ ಈ ಹಿಂದೆಯೂ ದ್ವೇಷ ಭಾಷಣ ಮಾಡಿದ್ದರು. 2020 ರಲ್ಲಿ ಮಾತನಾಡಿದ್ದ ಅವರು, ಮೋದಿ ಮತ್ತು ಅಮಿತ್ ಶಾ ಅವರನ್ನು ವಿರೋಧಿಸುವ ಜನರು, ಗೌರಿ ಲಂಕೇಶ್ ರೀತಿ ಬಲಂಥೀಯ ಉಗ್ರಗಾಮಿಗಳ ಗುಂಡಿಗೆ ಬಲಿಯಾಗುತ್ತಾರೆ ಎಂದು ಹೇಳಿದ್ದರು. ಇದೀಗ ಶಿವಮೊಗ್ಗ ಘಟನೆಯ ಬಗ್ಗೆ ಮಾತನಾಡಿದ್ದಾರೆ.
ಅವರ ಭಾಷಣದ ವಿಡಿಯೋವನ್ನು ಆಧರಿಸಿ ಶಹಾಪುರ ಪೊಲೀಸರು ಸಿದ್ದಲಿಂಗ ಸ್ವಾಮಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು) ಮತ್ತು 153ಎ (ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






