Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚುನಾವಣೆಯಲ್ಲಿ ಅಕ್ರಮ ಆರೋಪ : ಯತ್ನಾಳ್ ಗೆ ಗೆಲುವು.. ಕಾಂಗ್ರೆಸ್ ಅಭ್ಯರ್ಥಿಗೆ ಮುಖಭಂಗ

---Advertisement---

ವಿಜಯಪುರ: ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅಕ್ರಮ ನಡೆಸಿದ್ದಂತ ಆರೋಪ ಕೇಳಿ ಬಂದಿತ್ತು. ಇದೀಗ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಜಯ ಸಿಕ್ಕಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಆರೋಪ ಮಾಡಿದ್ದರು. ಹೈಕೋರ್ಟ್ ನಲ್ಲಾಗಲೇ ತೀರ್ಮಾನ ಬಂದಿತ್ತು. ಇದೀಗ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದಿದೆ. ಈ ಮೂಲಕ ಅಬ್ದುಲ್ ಹಮೀದ್ ಮುಶ್ರೀಫ್ ಮುಖಭಂಗವಾಗಿದೆ.

ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂದು ನನ್ನ ಮೇಲೆ ಸುಳ್ಳು ಆರೋಪ ಮಾಡಿ Election Petition ದಾಖಲು ಮಾಡಿದ್ದ ಅಬ್ದುಲ್ ಹಮೀದ್ ಖಾಜಾ ಎಂಬುವವರ ಅರ್ಜಿಯನ್ನು ಕಲ್ಬುರ್ಗಿ ಉಚ್ಚ ನ್ಯಾಯಾಲಯವು ದಿನಾಂಕ 18.07.2025 ರಂದು ವಜಾ ಮಾಡಿತ್ತು ಹಾಗೂ ಅರ್ಜಿದಾರರಿಗೆ ದಂಡ ವಿಧಿಸಿತ್ತು.

ಉಚ್ಚ ನ್ಯಾಯಾಲಯದ ತೀರ್ಪನ್ನು ಖಾಜಾ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು.ಸರ್ವೋಚ್ಛ ನ್ಯಾಯಾಲಯವು ಇವರ ಅರ್ಜಿಯನ್ನು [CIVIL APPEAL No. 12194 OF 2024] ವಜಾ ಮಾಡಿತ್ತು, ಹಾಗೂ ದಂಡವನ್ನೂ ವಿಧಿಸಿತ್ತು. ಈ ಸರ್ವೋಚ್ಚ ನ್ಯಾಯಾಲಯದ ಆದೇಶದ ವಿಮರ್ಶೆ ಮಾಡಲು (Review Petition) ಮತ್ತೊಮ್ಮೆ ಅರ್ಜಿ ಸಲ್ಲಿಸಿ , ರಾಜಕೀಯವಾಗಿ ಲಾಭ ಪಡೆಯಬೇಕೆಂದು ಮಾಡಿದ್ದ ಷಡ್ಯಂತ್ರಕ್ಕೆ ಮುಖಭಂಗ ಆಗಿದೆ.

ಈ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾ ಗೊಳಿಸಿದೆ. ಈ ರೀತಿಯಾದ ಗೊಡ್ಡು ಬೆದರಿಕೆಗಳಿಗೆ ನಾನು ಹೆದರುವವನಲ್ಲ ಹಾಗೂ ನನ್ನ ಮೇಲೆ ರಾಜಕೀಯ ಪ್ರೇರಿತ, ಆಧಾರರಹಿತ ಆರೋಪಗಳನ್ನು ಮಾಡುವವರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಂಡು ಅದನ್ನು ತಾರ್ಕಿಕ ಅಂತ್ಯದ ವರೆಗೂ ಕೊಂಡೊಯುತ್ತೇನೆ. ಸತ್ಯವನ್ನು ಮರೆಮಾಚಲು ಯಾರಿಂದಲೂ ಸಾಧ್ಯವಿಲ್ಲ. ವಿಜಯಪುರದ ಜನತೆ ನನ್ನೊಂದಿಗೆ ಸದಾ ಇರುತ್ತಾರೆ ಹಾಗೂ ಅವರ ಆಶಿರ್ವಾಯಾದ ನನ್ನ ಮೇಲೆ ಸದಾ ಇರುತ್ತದೆ ಎಂಬ ಅಚಲ ವಿಶ್ವಾಸ ನನ್ನಲ್ಲಿದೆ. ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡುವ ಈ ‘ರಾಜಕೀಯ ನಿರುದ್ಯೋಗಿಗಳಿಗೆ’ ನ್ಯಾಯಾಲಯ ದಂಡ ವಿಧಿಸುವ ಮೂಲಕ ಕ್ರಮ ಜರುಗಿಸಿದೆ. ಸತ್ಯಮೇವ ಜಯತೆ ಎಂದು ಯತ್ನಾಳ್ ಟ್ವೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now