ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಹೊಸದುರ್ಗ : ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ಹಾಗೂ ವಸತಿ ಸೌಲಭ್ಯವಿಲ್ಲದೆ ಇರುವ ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದ್ದು, ಅರ್ಹರು ಈ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಗೊರವಿನಕಲ್ಲು ರಿ.ಸ.ನಂ. 86ರಲ್ಲಿ ನಿವೇಶನ ಹಂಚಿಕೆ ಮಾಡಲು 2026ರ ಮಾರ್ಚ್ 13ರಂದು ನಡೆದ ಆಶ್ರಯ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸದುರ್ಗ ಪುರಸಭೆ ಕಚೇರಿಯಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.
ಅರ್ಜಿದಾರರು ಅರ್ಜಿಯೊಂದಿಗೆ ಗಂಡ-ಹೆಂಡತಿ ಹಾಗೂ ಮಕ್ಕಳ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲುಗಳನ್ನು ಲಗತ್ತಿಸಬೇಕು. ಜೊತೆಗೆ ದೇಶದ ಯಾವುದೇ ಭಾಗದಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದಿಲ್ಲವೆಂಬುದನ್ನು ದೃಢೀಕರಿಸುವ 20 ರೂ. ಮೌಲ್ಯದ ಛಾಪಾ ಕಾಗದದಲ್ಲಿ ನೋಟರಿ ಮಾಡಿದ ಸ್ವಯಂ ಘೋಷಣೆ ಪತ್ರವನ್ನು ಕೂಡ ಸಲ್ಲಿಸುವುದು ಕಡ್ಡಾಯವಾಗಿದೆ.ನಿಗದಿತ ಗಡುವಿನ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪುರಸಭೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್