ಸಿ.ಬಿ.ಸಿ.ಎಸ್. ಪದವಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಿ : ಎಐಡಿಎಸ್ಓ ಚಿತ್ರದುರ್ಗ ಜಿಲ್ಲಾ ಘಟಕ ಒತ್ತಾಯ

1 Min Read

 

ಸುದ್ದಿಒನ್, ಚಿತ್ರದುರ್ಗ, ಆ.28 :

ದಾವಣಗೆರೆ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಸಿ.ಬಿ.ಸಿಎಸ್ ಬ್ಯಾಚಿನ ಪದವಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ವಿಶ್ವವಿದ್ಯಾಲಯದ ಕುಲಪತಿ ಅವರಿಗೆ ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರ ಮೂಲಕ ಎಐಡಿಎಸ್ಓ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.

ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಮನವಿ ಸಲ್ಲಿಸಿ ಮಾತನಾಡಿದ, ಎಐಡಿಎಸ್ಓ ರಾಜ್ಯ ಸೆಕ್ರೆಟರಿಯೇಟ್ ಸದಸ್ಯ ಕೆ.ಈರಣ್ಣ,  ಇತ್ತೀಚೆಗೆ ಸಿ.ಬಿ.ಸಿ.ಎಸ್ ಬ್ಯಾಚಿನ ಪದವಿ ವಿದ್ಯಾರ್ಥಿಗಳು ಪರೀಕ್ಷೆ ಬರೆದು, ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ತಮಗೆಲ್ಲ ತಿಳಿದಿರುವ ವಿಷಯ.

ಎಷ್ಟೋ ವಿದ್ಯಾರ್ಥಿಗಳು ಕೆಲವೊಂದು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ. ಈಗ ವಿದ್ಯಾರ್ಥಿಗಳಿಗೆ ಮುಂದಿನ ಉನ್ನತ ಶಿಕ್ಷಣಕ್ಕೆ ಹೋಗಲು ಸಾಕಷ್ಟು ತೊಂದರೆಯಾಗುತ್ತಿದ್ದು, ಯಾವುದೋ ಒಂದು ಅಥವಾ ಎರಡು ವಿಷಯಗಳ ಅನುತ್ತೀರ್ಣರಾಗಿ, ಇಡೀ ವರ್ಷವಿಡೀ ಕಾಯಬೇಕಾದ ಪರಿಸ್ಥಿತಿ ಉಂಟಾಗುತ್ತದೆ. ಆದ್ದರಿಂದ ಈ ಬ್ಯಾಚಿನ ಪದವಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಹಿತದೃಷ್ಟಿಯಿಂದ ಮರು ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತರುಣ್, ಆಕಾಶ್, ಯಶ್ವಂತ್, ಅಭಿ, ಜಯಂತ್, ಚಂದನ್, ಅಕ್ಷಯ್, ಅಂಜನಿಪುತ್ರ, ಆದಿ, ಭರತ್, ದರ್ಶನ್ ಮತ್ತಿತರರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *