ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನಕ್ಕೆ ಅವಕಾಶ : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ.

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಏ.03) :  ಪ್ರಸಕ್ತ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗಿರುವ ವಿವಿಧ ಕ್ಷೇತ್ರಗಳ ಚಿತ್ರದುರ್ಗ ಜಿಲ್ಲೆಯ ಸಿಬ್ಬಂದಿಗಳು ಮತದಾನದಿಂದ ವಂಚಿತರಾಗದಂತೆ ಈ ಬಾರಿ ಚುನಾವಣಾ ಆಯೋಗ, ಇವರಿಗೆ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.

ಪೋಸ್ಟಲ್ ಬ್ಯಾಲಟ್ ನಲ್ಲಿ ಮತದಾನ ಮಾಡುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾರೊಬ್ಬ ಅರ್ಹ ಮತದಾರನೂ ಕೂಡ ಮತದಾನದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಚುನಾವಣಾ ಆಯೋಗವು ಈ ಬಾರಿ ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗುವ ವಿದ್ಯುತ್ ಇಲಾಖೆ, ಬಿಎಸ್‍ಎನ್‍ಎಲ್, ರೈಲ್ವೆ, ದೂರದರ್ಶನ, ಆಕಾಶವಾಣಿ, ಆರೋಗ್ಯ ಇಲಾಖೆ, ವಿಮಾನಯಾನ, ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ನೌಕರರು, ಅಗ್ನಿಶಾಮಕ ಸೇವೆ, ಮಾನ್ಯತೆ ಹೊಂದಿರುವ ಪತ್ರಕರ್ತರು, ಟ್ರಾಫಿಕ್ ಪೊಲೀಸ್ ಮತ್ತು ಆಂಬುಲೆನ್ಸ್ ಸೇವೆಯಲ್ಲಿರುವರು ಕರ್ತವ್ಯದ ಕಾರಣದಿಂದಾಗಿ ಮತದಾನದ ದಿನದಂದು ಮತ ಚಲಾಯಿಸಲು ಸಾಧ್ಯವಾಗದ ಸಂದರ್ಭ ಬರಬಹುದಾದ ನೌಕರರು, ಈ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನ ಮಾಡುವಂತಹ ಅವಕಾಶವನ್ನು ಬಳಸಬಹುದಾಗಿದೆ.

ಮೇಲೆ ತಿಳಿಸಿದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಪೋಸ್ಟಲ್ ಬ್ಯಾಲಟ್ ಸೇವೆ ಪಡೆಯಲು, ಅವರು ಕಡ್ಡಾಯವಾಗಿ ಚಿತ್ರದುರ್ಗ ಜಿಲ್ಲೆಯ ಯಾವುದಾದರೂ ಮತಗಟ್ಟೆಯಲ್ಲಿ ತಮ್ಮ ಮತ ಹೊಂದಿರಬೇಕು.  ಬೇರೆ ಜಿಲ್ಲೆಯಲ್ಲಿ ಮತ ಹೊಂದಿರುವ ನೌಕರರಿಗೆ ಈ ಸೌಲಭ್ಯ ಅನ್ವಯವಾಗುವುದಿಲ್ಲ.

ಮತದಾನ ದಿನದಂದು ಮತಗಟ್ಟೆಗೆ ತೆರಳಿ ಮತ ಚಲಾಯಿಸಲು ಸಾಧ್ಯವಾಗದೇ ಇರುವಂತಹ ನೌಕರರು ಪೋಸ್ಟಲ್ ಬ್ಯಾಲಟ್ ಮೂಲಕ ಮತ ಚಲಾಯಿಸಲು, ಸಂಬಂಧಪಟ್ಟ ಇಲಾಖೆಯಿಂದ 12ಡಿ ನಮೂನೆಯನ್ನು ಪಡೆದು, ಸ್ವೀಕೃತಿ ನೀಡಬೇಕು.  ಬಳಿಕ ಭರ್ತಿ ಮಾಡಿದ ನಮೂನೆಯನ್ನು ಸಂಬಂಧಪಟ್ಟ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು.

12 ಡಿ ನಮೂನೆಯನ್ನು ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಒಮ್ಮೆ ಸಲ್ಲಿಸಿದ ಬಳಿಕ, ಅಂತಹವರು, ಪೋಸ್ಟಲ್ ಬ್ಯಾಲಟ್ ಮೂಲಕವೇ ಮತದಾನ ಮಾಡಬೇಕು, ಮತದಾನ ದಿನದಂದು ಮತಗಟ್ಟೆಗೆ ತೆರಳಿ ಮತದಾನ ಮಾಡಲು ಅವಕಾಶ ಇರುವುದಿಲ್ಲ.  ಈ ವಿಧಾನವು ಕೇವಲ ಆಯಾ ಸಿಬ್ಬಂದಿಗೆ ಐಚ್ಛಿಕವಾಗಿದ್ದು, ಕಡ್ಡಾಯವಲ್ಲ.  ಆದಾಗ್ಯೂ ಅವಕಾಶ ಲಭ್ಯವಿದ್ದಲ್ಲಿ ಮತಗಟ್ಟೆಗೆ ತೆರಳಿ ಚುನಾವಣೆಯ ಹಬ್ಬದಲ್ಲಿ ಪಾಲ್ಗೊಂಡು ಮತದಾನ ಮಾಡುವಂತಹ ಅನುಭವವನ್ನು ಹೊಂದುವುದು ಮೊದಲ ಆಯ್ಕೆಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಹೇಳಿದರು.

ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವಂತಹ ಅಗತ್ಯ ಸೇವೆಗಳ ಸಿಬ್ಬಂದಿಗಳ ವಿವರವನ್ನು ಕೂಡಲೆ ಸಲ್ಲಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್, ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಪೋಸ್ಟಲ್ ಬ್ಯಾಲಟ್ ನೋಡಲ್ ಅಧಿಕಾರಿಯಾದ ತೋಟಗಾರಿಕೆ ಉಪನಿರ್ದೇಶಕಿ ಸವಿತಾ, ಡಿಹೆಚ್‍ಒ ಡಾ. ರಂಗನಾಥ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

Recent Posts

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

9 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

9 hours ago

ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ಜಿ.ಪಂ ಸಿಇಒ

ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

9 hours ago

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು  ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…

9 hours ago

ವಾಹನ ಚಾಲನೆ ವೇಳೆ ತಾಳ್ಮೆ ಅಗತ್ಯ : ಮಹಾಂತೇಶ್

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…

9 hours ago

ಮಹೇಶ್ ಮೋಟಾರ್ಸ್ ನಲ್ಲಿ ಹೊಸ ಹೀರೋ ಡೆಸ್ಟಿನಿ 125 ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…

10 hours ago