Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಣದ ಜೊತೆ ಮಕ್ಕಳು ಆಟಗಳಲ್ಲಿಯೂ ಭಾಗವಹಿಸಬೇಕು : ಎನ್.ಡಿ.ಕುಮಾರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ನವೆಂಬರ್.02 : ಕೇಂದ್ರ ಸರ್ಕಾರದ ಖೇಲೋ ಇಂಡಿಯಾದಿಂದ ಮಕ್ಕಳು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಹಕಾರಿಯಾಗಲಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸುಚೇತ ನೆಲವಗಿ ಹೇಳಿದರು.

ಸ್ಟೇಡಿಯಂ ರಸ್ತೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಷಟಲ್ ಬ್ಯಾಡ್ಮಿಂಟನ್ ಉಚಿತ ಕೋಚಿಂಗ್‍ನಲ್ಲಿ ಕ್ರೀಡಾಪಟುಗಳಿಗೆ ಉಚಿತ ಸಮವಸ್ತ್ರ, ಪರಿಕರಗಳನ್ನು ವಿತರಿಸಿ ಮಾತನಾಡಿದರು.

ಖೇಲೋ ಇಂಡಿಯಾ ಉದಯೋನ್ಮುಖ ಕ್ರೀಡಾಪಟುಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರಲು ನೆರವಾಗಲಿದೆ. ಹಾಗಾಗಿ ಉಚಿತ ಕೋಚಿಂಗನ್ನು ಸದುಪಯೋಗ  ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಅಂತರಾಷ್ಟ್ರೀಯ ಕ್ರೀಡಾಪಟು ಎನ್.ಡಿ.ಕುಮಾರ್ ಮಾತನಾಡಿ ಶಿಕ್ಷಣದ ಜೊತೆ ಮಕ್ಕಳು ಆಟಗಳಲ್ಲಿಯೂ ತೊಡಗಬೇಕು. ಆಗ ಮಾತ್ರ ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ಮಕ್ಕಳನ್ನು ಕೇವಲ ಅಂಕ ಗಳಿಕೆಯ ಯಂತ್ರಗಳನ್ನಾಗಿ ಮಾಡುವ ಬದಲು ಬಯಲು ಆಟದಲ್ಲಿ ತೊಡಗಿಕೊಳ್ಳುವಂತೆ ಪೋಷಕರುಗಳು ಉತ್ತೇಜನ ನೀಡಬೇಕು. ಇಂದಿನ ದಿನಗಳಲ್ಲಿ ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತರುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರುಗಳ ಮೇಲಿದೆ ಎಂದು ಹೇಳಿದರು.

ಷಟಲ್ ಬ್ಯಾಡ್ಮಿಂಟನ್ ಕೋಚ್ ಗುರುಮೂರ್ತಿ, ಬೆಸ್ಕಾಂ ಅಧಿಕಾರಿ ನಾಗರಾಜು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!