ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ನ. 30 :
ದುರ್ಗಾ ಸ್ಪೈಕರ್ಸ್ ವಾಲಿಬಾಲ್ ಕ್ಲಬ್ ಮತ್ತು ವಾಲಿಬಾಲ್ ಅಸೋಸಿಯೇಷನ್ ಅಫ್ ಚಿತ್ರದುರ್ಗ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯೋತ್ಸವ ಕಪ್ 2025ನ್ನು ನಗರದ ಒನಕೆ ಓಬವ್ವ ಕ್ರೀಡಾಂಗಣದ ಮೈದಾನದಲ್ಲಿ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯನ್ನು ಭಾನುವಾರ ಏರ್ಪಡಿಸಲಾಗಿತ್ತು.
ಚಿತ್ರದುರ್ಗ ಜಿಲ್ಲಾ ಮಟ್ಟದ ವಾಲಿಬಾಲ್ ಟೂರ್ನಿಯನ್ನು ಶ್ರೀ ಮಾದಾರ ಚನ್ನಯ್ಯ ಬಸವಮೂರ್ತಿ ಶ್ರೀಗಳು ಸ್ವಾಮೀಜಿ ಉದ್ಘಾಟಿಸಿ ಮಾತನಾಡಿ ಚಿತ್ರದುರ್ಗದಲ್ಲಿ ಕ್ರೀಡೆಗಳು ಕ್ರೀಡಾ ಚಟುವಟಿಕೆಗಳು ಬೆಳೆಯಬೇಕು. ಚಿತ್ರದುರ್ಗದಲ್ಲಿ ವಿವಿಧ ರೀತಿಯ ಕ್ರೀಡೆಗಳು ವರ್ಷ ಪೂರ್ತಿಯಾಗಿ ನಡೆಯುತ್ತವೆ, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಪಾಠದ ಜೊತೆಗೆ ಅಟವನ್ನು ಸಹಾ ಆಡುವುದರ ಮೂಲಕ ಮಾನಸಿಕ ಹಾಗೂ ದೈಹಿಕವಾಗಿ ಸದೃಡರಾಗಬೇಕಿದೆ ಎಂದರು.
ಅಂತರಾಷ್ಟ್ರೀಯ ಕ್ರೀಡಾಪಟು ಎನ್.ಡಿ. ಕುಮಾರ್ ಮಾತನಾಡಿ ಕ್ರೀಡೆಗೆ ಯಾವುದೇ ಜಾತಿ ಧರ್ಮ ಭೇದವಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ವಾಲಿಬಾಲ್ ಕೋಚ್ ಮಹಿಬುಲ, ಡಿವೈಎಸ್ಪಿ ರಹಮನ್ ಸೋಮಶೇಖರ್, ತಿಮ್ಮಣ್ಣ, ಸಾಧಿಕ್, ನಿಶ್ಚಿತ್, ವೈಶಾಕ್, ತಿಪ್ಪೇಸ್ವಾಮಿ, ಸಿದ್ದೇಶ್, ಮಿಲ್ಟಿ ಶಿವು ಮುಂತಾದವರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















