Connect with us

Hi, what are you looking for?

ಪ್ರಮುಖ ಸುದ್ದಿ

ಜಿಲ್ಲೆಯಲ್ಲಿ ಮೇ 26 ರಿಂದ ಜೂನ್ 7 ರವರೆಗೆ ಒಂದು ದಿನ ಬಿಟ್ಟು ಒಂದು ದಿನ ಸಂಪೂರ್ಣ ಲಾಕ್‍ಡೌನ್:‌ ಏನಿರುತ್ತೆ, ಏನಿರಲ್ಲ ? ಸಂಪೂರ್ಣ ಮಾಹಿತಿ !

ಸುದ್ದಿಒನ್, ಚಿತ್ರದುರ್ಗ, (ಮೇ.25) : ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣದ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮೇ 26 ರಿಂದ ಜೂನ್ 7 ರಂದು ಬೆಳಗ್ಗೆ 6 ಗಂಟೆಯವರೆಗೆ ದಿನ ಬಿಟ್ಟು ಒಂದು ದಿನ ಸಂಪೂರ್ಣ ಲಾಕ್‍ಡೌನ್ ವಿಧಿಸಲಾಗಿದೆ. ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರಗಳಂದು ಸಂಪೂರ್ಣ ಲಾಕ್ ಡೌನ್ ಇರುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೋವಿಡ್-19ಗೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮೇ 27, 29, 30 ಹಾಗೂ ಜೂನ್ 01, 03, 05 ಹಾಗೂ 06 ರಂದು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ವಿಧಿಸಲಾಗಿದೆ. ಈ ದಿನಗಳಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಸೇವೆಗಳಿರುವುದಿಲ್ಲ. ತರಕಾರಿ, ಹಣ್ಣು, ದಿನಸಿ ಅಂಗಡಿಗಳು ಇರುವುದಿಲ್ಲ. ಹಾಲಿನ ಉತ್ಪನ್ನಗಳು ಮಾತ್ರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಇರುತ್ತದೆ.
ಮೇ 26, 28, 31 ಹಾಗೂ ಜೂನ್ 02 ಹಾಗೂ 04 ರಂದು ಬೆಳಗ್ಗೆ 6 ರಿಂದ 10 ರವೆರೆಗೆ ಸಂಪೂರ್ಣ ಲಾಕ್‍ಡೌನ್‍ನಿಂದ ವಿನಾಯಿತಿ ನೀಡಲಾಗಿದೆ.

ಲಾಕ್‍ಡೌನ್ ವಿನಾಯಿತಿ ದಿನಗಳಂದು ಬೆಳಿಗ್ಗೆ 06 ರಿಂದ 10 ರವರೆಗೆ ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಸಂಪೂರ್ಣ ಲಾಕ್‍ಡೌನ್ ವಿಧಿಸಿರುವ ದಿನಗಳಂದು ಹಾಲಿನ ಉತ್ಪನ್ನಗಳ ಮಾರಾಟ ಬೆಳಿಗ್ಗೆ 06 ರಿಂದ 10 ರವರೆಗೆ ಅವಕಾಶ ಕಲ್ಪಿಸಲಾಗಿದೆ. ವೈದ್ಯಕೀಯ ತುರ್ತು ಸೇವೆಗಳು, ಎಲ್ಲಾ ಆಸ್ಪತ್ರೆ, ಮೆಡಿಕಲ್ಸ್, ಪೆಟ್ರೋಲ್ ಬಂಕ್, ಇ-ಕಾಮರ್ಸ್, ತಿಂಡಿ ಮತ್ತು ಊಟ ಪಾರ್ಸೆಲ್ ಸೇವೆಗಳು, ಗೂಡ್ಸ್ ವಾಹನಗಳ ಸಂಚಾರ, ದಿನಸಿ ಪಾರ್ಸೆಲ್ ಸೇವೆಗಳು, ಸರ್ಕಾರದ ಮೇ 07 ಮತ್ತು ಮೇ 21ರಂದು ಇನ್ನಿತರೆ ಹೆಚ್ಚುವರಿ ಆದೇಶದಲ್ಲಿ ಉಲ್ಲೇಖಿಸಿರುವ ನಿರಂತರ ಉತ್ಪಾದನಾ ಕೈಗಾರಿಕೆ, ಉದ್ದಿಮೆಗಳು ಸೇವೆ ಪಡೆಯಬಹುದಾಗಿದೆ. ಸಂಪೂರ್ಣ ಲಾಕ್‍ಡೌನ್ ಹೊರತಾದ ದಿನಗಳಲ್ಲಿನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮೇ 07 ಮತ್ತು ಮೇ 21ರಂದು ಇನ್ನಿತರೆ ಹೆಚ್ಚುವರಿ ಆದೇಶಗಳಲ್ಲಿ ಬೆಳಿಗ್ಗೆ 06 ರಿಂದ 10 ಗಂಟೆಯವರೆಗೆ ನಿರ್ಬಂಧಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಈ ಆದೇಶದ ಜೊತೆಯಲ್ಲಿ ಈಗಾಗಲೇ ಸಿ.ಆರ್.ಪಿ.ಸಿ. 144 ರಡಿಯಲ್ಲಿ ಹೊರಡಿಸಿರುವ ನಿಷೇಧಾಜ್ಞೆ ಆದೇಶವು ಸಹ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಆರ್.ಸಿ.ಹೆಚ್.ಅಧಿಕಾರಿ ಡಾ; ಕುಮಾರಸ್ವಾಮಿ ಮಾತನಾಡಿ 45 ವರ್ಷ ಮೇಲ್ಪಟ್ಟವರಿಗೆ ಹಾಕಿಕೊಂಡ ಗುರಿಯಲ್ಲಿ ಶೇ 77 ರಷ್ಟು ಸಾಧನೆ ಮಾಡಲಾಗಿದೆ. ಈಗ 18 ರಿಂದ 44 ವರ್ಷದವರಿಗೂ ಲಸಿಕೆ ಹಾಕಲಾಗುತ್ತಿದ್ದು 40 ಆಧ್ಯತಾ ಗುಂಪುಗಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಶೀಲ್ಡ್ 28500 ಲಸಿಕೆಗಳು ಲಭ್ಯವಿದ್ದು ಲಸಿಕಾ ಕೇಂದ್ರದಲ್ಲಿ ಲಸಿಕೆಯನ್ನು ನೀಡಲಾಗುತ್ತದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಪಾಲಾಕ್ಷ, ಆರ್.ಸಿ.ಹೆಚ್.ಅಧಿಕಾರಿ ಡಾ; ಕುಮಾರಸ್ವಾಮಿ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Latest

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

ಪ್ರಮುಖ ಸುದ್ದಿ

ಬೆಂಗಳೂರು :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೊನೆ ಕ್ಷಣದಲ್ಲಿ ತನ್ನ ಪಾಳಯದ ಬಸವರಾಜ್ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಬಿ.ಎಸ್.ಯಡಿಯೂರಪ್ಪ. ದೆಹಲಿಯಲ್ಲಿ ಸಚಿವ ಸಂಪುಟ ಕಸರತ್ತು...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!