ಸುದ್ದಿಒನ್, ಚಿತ್ರದುರ್ಗ, ನವಂಬರ್.06 : ತಾಲ್ಲೂಕಿನ ಸೀಬಾರ ಗುತ್ತಿನಾಡು ಸಮೀಪದ ವಿಶ್ವಮಾನವ ಶಾಲೆಯಲ್ಲಿ ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ ಹಳೆಯ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮ ನಡೆಯಿತು.
ಸಂಸ್ಥೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ಸಂಸ್ಥೆಯ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮುಗಿಸಿ ಹೋದಂತಹ ಎಲ್ಲಾ ವಿದ್ಯಾರ್ಥಿಗಳನ್ನು ಆಹ್ವಾನಿಸಿ “ಹಳೆಯ ವಿದ್ಯಾರ್ಥಿಗಳ ಸಮಾಗಮ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
2000-2001ನೇ ಸಾಲಿನಿಂದ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶಾಲೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಹಾಗೂ 2012-13ನೇ ಸಾಲಿನಿಂದ ಪಿಯುಸಿ ವಿಭಾಗದಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಾಗೆಯೇ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವವರನ್ನು ಹಾಗೂ ಸಮಾಜದಲ್ಲಿ ಉನ್ನತ ಸ್ಥಾನಮಾನ ಹೊಂದಿದವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಲವು ವರ್ಷಗಳ ನಂತರ ತಮ್ಮ ಹಳೆಯ ಸ್ನೇಹಿತರನ್ನು ಭೇಟಿ ಮಾಡಿ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾ ಸಂಭ್ರಮಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು.
ಅಧ್ಯಕ್ಷತೆಯನ್ನು ಬಿ.ಜಿ.ಶಿವರುದ್ರಯ್ಯ, ಮುಖ್ಯ ಶಿಕ್ಷಕರು ವಿಶ್ವಮಾನವ ವಸತಿ ಶಾಲೆ, ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಎಂ ನೀಲಕಂಠದೇವರು, ಕಾರ್ಯದರ್ಶಿಗಳು, ಹೆಚ್. ಜಲೀಲ್ ಸಾಬ್ ವಹಿಸಿದ್ದರು.
ಜಿ.ಆರ್.ಚನ್ನಬಸಪ್ಪ, ಮುಖ್ಯೋಪಾಧ್ಯಾಯರು, ವಿಶ್ವಮಾನವ ವಸತಿ ಶಾಲೆ, ಶ್ರೀಮತಿ.ಸುಧಾ. ಪ್ರಾಂಶುಪಾಲರು ವಿಶ್ವಮಾನವ ಪದವಿಪೂರ್ವ ಕಾಲೇಜು, ಹಿರಿಯ ಶಿಕ್ಷಕರಾದ ಏ,ಆರ್.ರಂಗಪ್ಪ, ಎಸ್.ಎಂ.ಬಿ.ಸ್ವಾಮಿ ಇವರುಗಳು ಉಪಸ್ಥಿತದ್ದರು.