ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ, ಭೀಮಸಮುದ್ರ,
ಮೊ : 98808 36505
ಚಿತ್ರದುರ್ಗ : ವಿಕಲಚೇತನರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು. ಮನೆಯವರಿಗೆ ಹೊರೆಯಾಗದಂತೆ ಅವರವರ ಕಾಲ ಮೇಲೆ ನಿಂತುಕೊಂಡು ಅವರು ದುಡಿಯುತ್ತೇನೆ ಎಂಬ ನಂಬಿಕೆ ಬರಬೇಕು ಎಂದು ಶಾಸಕ ವೀರೇಂದ್ರ ತಿಳಿಸಿದರು.
ಅವರು ತಾಲ್ಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ವಿಕಲಚೇತನ ಕ್ಷೇಮಾಭಿವೃದ್ಧಿ ಹಾಗೂ ಕೌಶಲ್ಯ ಅಭಿವೃದ್ಧಿ ಕೇಂದ್ರಉದ್ಘಾಟನೆ ಮಾಡಿ ಮಾತನಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅಂಗವಿಕಲರಿಗೆ ವಿಕಲಚೇತನ ಕ್ಷೇಮಾಭಿವೃದ್ಧಿ ಹಾಗೂ ಕೌಶಲ್ಯ ಅಭಿವೃದ್ಧಿ ಕೇಂದ್ರ ಸಹಕಾರವಾಗುತ್ತದೆ. ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಸುಮಾರು 23 ಜನ ಅಂಗವಿಕಲರಿದ್ದು ಇವರು ಯಾರಿಗೂ ಹೊರೆಯಾಗದಂತೆ ಸ್ವಾವಲಂಬಿಯಾಗಿ ಜೀವನ ಮಾಡಲು ಈ ಕೇಂದ್ರವನ್ನು ತೆರೆದಿದ್ದೇವೆ.
ಈ ಕೇಂದ್ರದಲ್ಲಿ ಟೈಲರಿಂಗ್ ತರಬೇತಿ, ಕಂಪ್ಯೂಟರ್ ಶಿಕ್ಷಣ ಹಾಗೂ ಅವರಿಗೆ ಬೇಕಾದ ಬ್ಯಾಂಕಿನ ಸಾಲ ಸೌಲಭ್ಯಗಳನ್ನು ಒದಗಿಸಲು ಈ ಕೇಂದ್ರ ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಚಿತ್ರದುರ್ಗ ತಾಲೂಕಿನ ಸುಮಾರು 23 ಗ್ರಾಮ ಪಂಚಾಯಿತಿಗಳಲ್ಲಿ, ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇಂತಹ ಕೇಂದ್ರಗಳನ್ನು ಸ್ಥಾಪನೆ ಮಾಡುತ್ತೇವೆ. ಅದಕ್ಕೆ ಬೇಕಾದ ಹಣವನ್ನು ಶಾಸಕರ ನಿಧಿಯಿಂದ ಕೊಡುತ್ತೇವೆ. ಸುಮಾರು ಐದು ಲಕ್ಷದಿಂದ 10 ಲಕ್ಷದವರೆಗೆ ಹಣ ನೀಡುತ್ತೇವೆ.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ನಯನ್ ಕುಮಾರ್, ಆರ್. ರವಿಕುಮಾರ್, ಹೆಚ್.ಎಂ. ಕಲ್ಲೇಶ್ ಹಾಗೂ ಗ್ರಾಮ ಪಂಚಾಯಿತಿ ಪಿಡಿಓ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…