Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂಬಾಭವಾನಿ ದೇವಸ್ಥಾನದ ವಿಜೃಂಭಣೆಯ ದುರ್ಗ ದೌಡ್ ಮೆರವಣಿಗೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ನಗರದ ಕೆಳಗೋಟೆಯಲ್ಲಿರುವ ಅಂಬಾಭವಾನಿ ದೇವಸ್ಥಾನದಲ್ಲಿ ನಡೆದ ದೇವಿಯ ನವರಾತ್ರಿ ಹಾಗೂ ವಿಜಯದಶಮಿ ಪ್ರಯುಕ್ತ ಮರಾಠ ವಿದ್ಯಾವರ್ಧಕ ಸಂಘದ ವತಿಯಿಂದ ದುರ್ಗ ದೌಡ್ ಮೆರವಣಿಗೆ ಬುಧವಾರ ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿತು.

ರಂಗಯ್ಯನಬಾಗಿಲಿನಿಂದ ಹೊರಟ ಮೆರವಣಿಗೆ ಉಚ್ಚಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗದ ರಸ್ತೆಯಿಂದ ಸಾಗಿ ಆನೆಬಾಗಿಲು, ಗಾಂಧಿವೃತ್ತ, ಎಸ್.ಬಿ.ಎಂ.ಸರ್ಕಲ್, ಅಂಬೇಡ್ಕರ್ ವೃತ್ತ, ಒನಕೆ ಓಬವ್ವ ಪ್ರತಿಮೆ ಮುಂಭಾಗದಿಂದ ಅಂಬಾಭವಾನಿ ದೇವಸ್ಥಾನ ತಲುಪಿತು.

ಮೆರವಣಿಗೆಯಲ್ಲಿದ್ದ ಪುರುಷರು ಮಹಿಳೆಯರು ಕೇಸರಿ ಪೇಟೆ ತೊಟ್ಟು ಶಿಸ್ತಿನಿಂದ ಸಾಗಿದರು. ಕೈಯಲ್ಲಿ ಭಗವಧ್ವಜ ಹಿಡಿದು ಜೈಶ್ರೀರಾಮ, ಜೈಶಿವಾಜಿ ಎನ್ನುವ ಘೋಷಣೆಗಳನ್ನು ಕೂಗುತ್ತ ಸಾಗಿದರು. ದಕ್ಷಿಣ ಕನ್ನಡದ ಚಂಡೆವಾದ್ಯ, ನಾಸಿಕ್‍ಡೋಲ್ ಮೆರವಣಿಗೆಯಲ್ಲಿ ಆಕರ್ಷಣೀಯವಾಗಿತ್ತು.

ಮರಾಠ ಸಮಾಜದ ಅಧ್ಯಕ್ಷ ಸುರೇಶ್‍ಜಾದವ್, ಕಾರ್ಯದರ್ಶಿ ಗೋಪಾಲ್‍ರಾವ್ ಜಾಧವ್, ಬಿಜೆಪಿ.ಯುವ ಮುಖಂಡರಾದ ಡಾ.ಸಿದ್ದಾರ್ಥ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರುಗಳಾದ ಕೆ.ತಿಪ್ಪೇಸ್ವಾಮಿ, ಟಿ.ಭದ್ರಿನಾಥ್, ಮರಾಠ ಸಮಾಜದ ರೋಹಿತ್ ಗಾಯಕ್‍ವಾಡ್, ಮಂಜುನಾಥ ಗಾಯಕ್‍ವಾಡ್, ಸತೀಶ್ ಜಾಧವ್, ನಿತೀನ್ ಜಾಧವ್, ಕೃಷ್ಣೋಜಿರಾವ್‍ಮೋರೆ, ನಾಗರಾಜ್‍ಬೇದ್ರೆ, ಶಾರದಬಾಯಿ, ಕಲಾಬಾಯಿ, ಪದ್ಮಬಾಯಿ ಸೇರಿದಂತೆ ಮರಾಠ ಸಮಾಜದ ಅನೇಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಕಾಳುಮೆಣಸು ಮತ್ತು ಏಲಕ್ಕಿ ವ್ಯಾಪಾರ ವಹಿವಾಟಗಾರರಿಗೆ ಭಾರಿ ನಷ್ಟ

ಈ ರಾಶಿಯ ಕಾಳುಮೆಣಸು ಮತ್ತು ಏಲಕ್ಕಿ ವ್ಯಾಪಾರ ವಹಿವಾಟಗಾರರಿಗೆ ಭಾರಿ ನಷ್ಟ, ಈ ರಾಶಿಯವರ ಆದಾಯ ದ್ವಿಗುಣ ನೋ ಡೌಟ್ : ಈ ರಾಶಿಯವರಿಗೆ ಉನ್ನತ ಸ್ಥಾನ ದೊರೆತು, ರಾಜಕೀಯ ಸಂಪೂರ್ಣ ಬೆಂಬಲ ಸಿಗಲಿದೆ,

ಬಾಳೆ ಬೆಲೆ ಭಾರೀ ಕುಸಿತ : ಬೆಳೆಗಾರ ಕಂಗಾಲು..!

    ರೈತ ಸಾಲ ಸೋಲ ಮಾಡಿ, ಕಷ್ಟಪಟ್ಟು ವ್ಯವಸಾಯ ಮಾಡುತ್ತಾನೆ. ಬೆಳೆದ ಬೆಲೆಗೆ ಬೆಂಬಲ ಸಿಕ್ಕರೆ ಖುಷಿಯಾಗುತ್ತಾನೆ. ಸಾಲ ತೀರಿಸಿ ಮತ್ತೆ ಭೂಮಿ ಹದ ಮಾಡುವತ್ತ ಗಮನ ಹರಿಸುತ್ತಾನೆ. ಆದರೆ ಬೆಳೆದ ಬೆಲೆಗೆ

ನವೋದಯ ವಿದ್ಯಾಲಯ: 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಚಿತ್ರದುರ್ಗ. ನ.25: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿಗೆ 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ

error: Content is protected !!