ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮದುವೆಯ ಸಂಭ್ರಮ ಶುರುವಾಗಿದೆ. ಇತ್ತಿಚೆಗಷ್ಟೇ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ನಿಶ್ಚಿತಾರ್ಥ ಮಾಡಿಕೊಂಡಿದ್ದರು, ಇದೀಗ ರೆಬಲ್ ಸ್ಟಾರ್ ಅಂಬರೀಶ್ ಅವರ ಪುತ್ರನ ಸರದಿ. ಇಂದು ಖಾಸಗಿ ಹೊಟೇಲ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಳೆದ ನಾಲ್ಕು ವರ್ಷದಿಂದ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಪ್ರೀತಿಯಲ್ಲಿದ್ದರಂತೆ. ಚಿಕ್ಕಂದಿಂದಾನು ಇಬ್ಬರು ಪರಿಚಯವಿದ್ದ ಕಾರಣ ಇಬ್ಬರ ನಡುವೆ ಪ್ರೀತಿ ಹುಟ್ಟಿ ನಾಲ್ಕು ವರ್ಷವಾಗಿತ್ತು ಎನ್ನಲಾಗಿದೆ. ಪ್ರೀತಿಯ ಬಗ್ಗೆ ಇಬ್ಬರು ಮನೆಯವರ ಬಳಿ ಹೇಳಿ ಒಪ್ಪಿಗೆ ಪಡೆದಿದ್ದು, ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಖಾಸಗಿ ಹೊಟೇಲ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಉಂಗುರ ಬದಲಾಯಿಕೊಳ್ಳುವ ಶಾಸ್ತ್ರ ಮುಗಿದಿದೆ. ಅವಿವಾ ಬಿದ್ದೊ್ಒ ಅವರ ಕುಟುಂಬಸ್ಥರು ಹಾಗೂ ಸುಮಲತಾ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಆಪ್ತರ ಬಳಗ ಮಾತ್ರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಸದ್ಯ ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್, ಕಾಳಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…