Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅನ್ಯಾಯದ ವಿರುದ್ಧ ಹೋರಾಡಿದ ಅಂಬೇಡ್ಕರ್ : ಸಚಿವ ಡಿ ಸುಧಾಕರ್

---Advertisement---

ಸುದ್ದಿಒನ್, ಹಿರಿಯೂರು, ಡಿಸೆಂಬರ್. 06  : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಅವರ 69ನೇ ಪುಣ್ಯಸ್ಮರಣೆ (ಮಹಾಪರಿನಿರ್ವಾಣ ದಿನ) ಅಂಗವಾಗಿ ನಗರದ ಟಿಬಿ ವೃತ್ತದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಮಾಲಾರ್ಪಣೆ ಮಾಡಿದರು.

ನಂತರ ಮಾತನಾಡಿದ ಸಚಿವರು ಅಂಬೇಡ್ಕರ್‌ ಹೋರಾಟದ ಫಲದಿಂದ ನಾವು ಉತ್ತಮ ಜೀವನ ಸಾಗಿಸುತ್ತಿದ್ದೇವೆ. ಅವರ ಚೈತನ್ಯದ ಶಕ್ತಿಯನ್ನು ಇಂದಿನ ಯುವ ಸಮೂಹ ಮೈಗೂಡಿಸಿಕೊಳ್ಳಬೇಕು. ಸಮಾಜದ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಕಾರ್ಮಿಕರು, ಮಹಿಳೆಯರ ಹಕ್ಕುಗಳಿಗಾಗಿ ಜೀವನವನ್ನೇ ಅರ್ಪಿಸಿದ ಅಂಬೇಡ್ಕರ್ ಅವರ ತತ್ವಗಳು ಇಂದಿಗೂ ನಮ್ಮನ್ನು ನ್ಯಾಯ, ಸಮಾನತೆ ಮತ್ತು ಬಾಂಧವ್ಯದ ಮಾರ್ಗದಲ್ಲಿ ನಡೆಸುತ್ತಿವೆ. ಅಂಬೇಡ್ಕರ್ ಆಲೋಚನೆಗಳ ಆಳ-ಅಗಲವನ್ನು ಅರ್ಥ ಮಾಡಿಕೊಳ್ಳುವ ಮನಸ್ಥಿತಿಯನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು. ಅವರ ಸಾಮಾಜಿಕ, ಆರ್ಥಿಕ ಸಮಾನತೆಯ ಚಿಂತನೆಯನ್ನು ವಾಸ್ತವಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ ಸಿದ್ದೇಶ್, ಡಿವೈಎಸ್ಪಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿನೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಮುಖಂಡರಾದ ಕಂದಿಕೆರೆ ಸುರೇಶ್ ಬಾಬು, ಕಲ್ಲಹಟ್ಟಿ ಹರೀಶ್, ಜಿಎಲ್ ಮೂರ್ತಿ, ವಿ. ಶಿವಕುಮಾರ್, ಜಿವೇಶ್, ಶಿವಕುಮಾರ್, ಮಂಜುಳಾ, ಮಮತಾ, ಸುಜಾತ, ಇಂದಿರಮ್ಮ, ದಲಿತರ ಸಂಘಟನೆಗಳ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...