ಸುದ್ದಿಒನ್, ಹಿರಿಯೂರು, ಡಿಸೆಂಬರ್. 06 : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಅವರ 69ನೇ ಪುಣ್ಯಸ್ಮರಣೆ (ಮಹಾಪರಿನಿರ್ವಾಣ ದಿನ) ಅಂಗವಾಗಿ ನಗರದ ಟಿಬಿ ವೃತ್ತದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಸಚಿವರು ಅಂಬೇಡ್ಕರ್ ಹೋರಾಟದ ಫಲದಿಂದ ನಾವು ಉತ್ತಮ ಜೀವನ ಸಾಗಿಸುತ್ತಿದ್ದೇವೆ. ಅವರ ಚೈತನ್ಯದ ಶಕ್ತಿಯನ್ನು ಇಂದಿನ ಯುವ ಸಮೂಹ ಮೈಗೂಡಿಸಿಕೊಳ್ಳಬೇಕು. ಸಮಾಜದ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಕಾರ್ಮಿಕರು, ಮಹಿಳೆಯರ ಹಕ್ಕುಗಳಿಗಾಗಿ ಜೀವನವನ್ನೇ ಅರ್ಪಿಸಿದ ಅಂಬೇಡ್ಕರ್ ಅವರ ತತ್ವಗಳು ಇಂದಿಗೂ ನಮ್ಮನ್ನು ನ್ಯಾಯ, ಸಮಾನತೆ ಮತ್ತು ಬಾಂಧವ್ಯದ ಮಾರ್ಗದಲ್ಲಿ ನಡೆಸುತ್ತಿವೆ. ಅಂಬೇಡ್ಕರ್ ಆಲೋಚನೆಗಳ ಆಳ-ಅಗಲವನ್ನು ಅರ್ಥ ಮಾಡಿಕೊಳ್ಳುವ ಮನಸ್ಥಿತಿಯನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು. ಅವರ ಸಾಮಾಜಿಕ, ಆರ್ಥಿಕ ಸಮಾನತೆಯ ಚಿಂತನೆಯನ್ನು ವಾಸ್ತವಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ ಸಿದ್ದೇಶ್, ಡಿವೈಎಸ್ಪಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿನೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಮುಖಂಡರಾದ ಕಂದಿಕೆರೆ ಸುರೇಶ್ ಬಾಬು, ಕಲ್ಲಹಟ್ಟಿ ಹರೀಶ್, ಜಿಎಲ್ ಮೂರ್ತಿ, ವಿ. ಶಿವಕುಮಾರ್, ಜಿವೇಶ್, ಶಿವಕುಮಾರ್, ಮಂಜುಳಾ, ಮಮತಾ, ಸುಜಾತ, ಇಂದಿರಮ್ಮ, ದಲಿತರ ಸಂಘಟನೆಗಳ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















