Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಬೇಡ್ಕರ್ ಜಯಂತಿ : ಅದ್ದೂರಿ ಹಾಗೂ ಅರ್ಥಪೂರ್ಣ ಆಚರಣೆಗೆ ಸಿದ್ಧತೆ

---Advertisement---

ಚಿತ್ರದುರ್ಗ.ಎಪ್ರಿಲ್.01: ಮುಂಬರುವ ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿಲು ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

 

ಜಿಲ್ಲಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ತಪ್ಪದೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಜಯಂತಿ ಅಂಗವಾಗಿ ಕನಕ ವೃತ್ತದಿಂದ ತರಾಸು ರಂಗಮಂದಿರದವರೆಗೆ ಸ್ತಬ್ದಚಿತ್ರ ಹಾಗೂ ಕಲಾತಂಡಗಳ ಮೆರವಣಿಗೆ ಆಯೋಜಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಾರ್ಮಿಕ, ಕೃಷಿ, ತೋಟಗಾರಿಕೆ, ಶಿಕ್ಷಣ, ಅರಣ್ಯ, ಆರೋಗ್ಯ ಇಲಾಖೆ ಸೇರಿದಂತೆ 10 ಹೆಚ್ಚು ಇಲಾಖೆಗಳು ಸರ್ಕಾರದ ಯೋಜನೆಗಳ ಮಹತ್ವ ಸಾರುವ ಆಕರ್ಷಕ ಸ್ತಬ್ದಚಿತ್ರಗಳನ್ನು ರಚಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎಲ್ಲಾ ತಾಲ್ಲೂಕುಗಳಿಂದಲೂ ವೈವಿದ್ಯಮಯವಾದ ಕಲಾತಂಡಗಳನ್ನು ಕರೆತಂದ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

 

ನಗರ ಪ್ರಮುಖ ರಸ್ತೆ ಹಾಗೂ ವೃತ್ತಗಳಿಗೆ ಅಲಂಕಾರ:
ಅಂಬೇಡ್ಕರ್ ಜಯಂತಿಯAದು ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಿಗೆ ನಗರ ಸಭೆಯಿಂದ ಅಲಂಕಾರ ಮಾಡಬೇಕು. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಟ್ರಾಕ್ಟರ್ ಅಲಂಕರಿಸಬೇಕು. ತರಾಸು ರಂಗಮಂದಿರದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿಯೂ ಅಗತ್ಯ ಸಿದ್ದತೆ ಕೈಗೊಳ್ಳಬೇಕು. ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಪ್ರತಿ ತಾಲ್ಲೂಕಿನಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಅಭ್ಯುದ್ಯಯಕ್ಕೆ ಶ್ರಮಿಸಿದ 2 ಸಂಘ ಸಂಸ್ಥೆಗಳನ್ನು ಗುರುತಿಸಿ ಸನ್ಮಾಸಿಸಲು ಕ್ರಮ ಕೈಗೊಳ್ಳಬೇಕು. ಇದರೊಂದಿಗೆ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೂ ಸನ್ಮಾನಿಸಬೇಕು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿ, ಜಿಲ್ಲೆಯ ಎಲ್ಲಾ ಜನಪ್ರತನಿಧಿಗಳು, ಸಂಘ ಸಂಸ್ಥೆಗಳಿಗೆ ವಿತರಿಸಿ ಜಯಂತಿಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಬೇಕು ಎಂದರು.

 

ಸಭೆಯಲ್ಲಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...