Connect with us

Hi, what are you looking for?

ಪ್ರಮುಖ ಸುದ್ದಿ

ಅಂಬೇಡ್ಕರ್ ಎಂದೂ ದಲಿತ ನಾಯಕರಾಗಿ ವಿಜೃಂಬಿಸಲಿಲ್ಲ; ಆರ್‍ಎಸ್‍ಎಸ್ ಹಿರಿಯ ಪ್ರಚಾರಕ ಸು.ರಾಮಣ್ಣ

ಚಿತ್ರದುರ್ಗ : ಅಂಬೇಡ್ಕರ್ ಅವರು ದಲಿತ ನಾಯಕರಾಗಿ ಎಂದೂ ವಿಜೃಂಬಿಸಲಿಲ್ಲ. ಶೋಷಿತರಿಗೆ ನ್ಯಾಯ ಕೊಡಿಸಲು ಶ್ರಮಿಸುವ ಮೂಲಕ ರಾಷ್ಟ್ರ ನಾಯಕರಾದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾದ ಸು.ರಾಮಣ್ಣ ಹೇಳಿದರು.

ನಗರದ ವಿ.ಪಿ.ಬಡಾವಣೆಯಲ್ಲಿನ ವಿಶ್ವ ಹಿಂದು ಪರಿಷತ್ – ಬಜರಂಗದಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದು ಎಲ್ಲ ಜಾತಿಯವರು ತಾವು ಮಾತ್ರ ಬೆಳೆಯಬೇಕು. ತಾವು ಬದುಕಬೇಕು ಎಂದು ಬಯಸುತ್ತಾರೆ. ಆದರೆ ಎಲ್ಲರೂ ಒಂದೇ ಎಂಬುದನ್ನು ಮರೆತಿದ್ದಾರೆ. ದಲಿತರು ಸಹ ರಾಷ್ಟ್ರದ ಒಂದು ಭಾಗ. ಅವರಿಗೆ ಎಲ್ಲರೂ ಮನ್ನಣೆ ನೀಡಬೇಕು. ಅವರಲ್ಲಿ ರಾಷ್ಟ್ರ ಭಾವನೆ, ರಾಷ್ಟ್ರಾಭಿಮಾನ ಬೆಳೆಸಬೇಕು ಎಂದರು.

ಯಾವುದೇ ಒಬ್ಬ ಮನುಷ್ಯನನ್ನು ವ್ಯಕ್ತಿಗತ ಪರಿಚಯ, ಕುಟುಂಬ, ಸಮುದಾಯ ಹಾಗೂ ದೇಶದ ಆಧಾರದ ಮೇಲೆ ಪರಿಚಯ ಮಾಡಲಾಗುತ್ತದೆ. ಇದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಆದರೆ ಒಂದು ಸಮುದಾಯದಲ್ಲಿ ಹುಟ್ಟಿದ ವ್ಯಕ್ತಿ, ಅದರ ಎಲ್ಲೆಯನ್ನು ಮೀರಿ ಬೆಳೆದು ಎಲ್ಲರ ಪ್ರೀತಿಗೆ ಪಾತ್ರರಾಗಬೇಕು ಎಂದು ತಿಳಿಸಿದರು.

ಭಾರತದ ಅಂತಃಸತ್ವ ತಿಳಿಯದ ನೆಹರು ಅಮೇರಿಕಾ, ರಷ್ಯಾ ವಿಚಾರಗಳನ್ನು ಸಕಲು ಮಾಡಲು ನೋಡಿದರು. ಗಾಂಧೀಜಿಯವರು ರಾಮರಾಜ್ಯದ ಕನಸು ಕಂಡರು. ಸಂವಿಧಾನ ರಚನೆ ಹೊಣೆಯನ್ನು ನೆಹರು ವಿದೇಶಿ ವ್ಯಕ್ತಿಗೆ ನೀಡಬೇಕು ಎಂದುಕೊಂಡಿದ್ದರು. ಆದರೆ ಗಾಂಧೀಜಿ ಸಂವಿಧಾನ ರಚನೆ ಜವಾಬ್ಧಾರಿಯನ್ನು ಅಂಬೇಡ್ಕರ್‍ಗೆ ನೀಡಿದರು. ಸಂವಿಧಾನ ರಚನೆ ಕರಡು ಸಮಿತಿಯಲ್ಲಿದ್ದ ಅಂಬೇಡ್ಕರ್ ಅತೀವ ಆಸಕ್ತಿ ತೋರಿದ ಪರಿಣಾಮ ಅವರು ಸಮಿತಿಯ ಅಧ್ಯಕ್ಷರಾದರು. ಹಾಗಾಗಿ ಸಂವಿಧಾನ ರಚನೆಯಲ್ಲಿ ಅವರದ್ದು ಸಿಂಹಪಾಲು ಎಂದು ಹೇಳಿದರು.

ಇಂದಿನ ದಿನಗಳಲ್ಲಿ ತಮಗೆ ದೊರೆತ ಅವಕಾಶವನ್ನು ದುರ್ಬಳಕೆ ಮಾಡಿಕೊಳ್ಳುವವರೇ ಹೆಚ್ಚು. ರಾಜಕಾರಣಿಗಳು, ಅಧಿಕಾರಿಗಳು ಅವಕಾಶವನ್ನು ಬಳಸಿಕೊಂಡು ತಮ್ಮವರನ್ನು ಬೆಳೆಸುತ್ತಾರೆ. ಆದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡು ರಾಷ್ಟ್ರದ ಹಿತಕ್ಕೆ ಸಂವಿಧಾನ ರಚಿಸಿದರು ಎಂದರು.

ದೇಶಕ್ಕೆ ಕೇವಲ ಸ್ವರಾಜ್ಯ ಸಿಕ್ಕರೆ ಸಾಲದು, ದಲಿತರಿಗೆ ಸಾಮಾಜಿಕ ಮಾನ್ಯತೆ ದೊರೆಯಬೇಕು ಎಂದು ಬಯಸಿದರು. ಅದಕ್ಕಾಗಿಯೇ ದಲಿತರಿಗೆ ಪ್ರತ್ಯೇಕ ಮತದಾನದ ಹಕ್ಕು ಬೇಕೆಂದು ಪ್ರತಿಪಾದಿಸಿದ್ದರು ಎಂದರು.

ಪತ್ರಕರ್ತ ರವಿ ಮಲ್ಲಾಪುರ ಅಧ್ಯಕ್ಷತೆ ವಹಿಸಿದ್ದರು. ವಕೀಲರಾದ ವಿಶ್ವನಾಥ್, ವಿಶ್ವ ಹಿಂದು ಪರಿಷತ್ – ಬಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

error: Content is protected !!