ಚಿತ್ರದುರ್ಗ : ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ಪ್ರವಾಸಿ ಮಂದಿರದಲ್ಲಿ ಬುಧವಾರ ಜಿಲ್ಲಾ ಸಮಿತಿ ಕಾರ್ಯಕಾರಿಣಿ ಸಭೆ ನಡೆಸಲಾಯಿತು.
ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ.ಆರ್.ಕೋದಂಡರಾಮ್ ಸಭೆಯನ್ನುದ್ದೇಶಿಸಿ ಮಾತನಾಡುತ್ತ ಜಿಲ್ಲೆಯಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯನ್ನು ಸಂಘಟಿಸಿ ಶಕ್ತಿ ತುಂಬಬೇಕಿದೆ. ದಲಿತರ ಮೇಲೆ ಎಲ್ಲಿಯಾದರೂ ದೌರ್ಜನ್ಯ, ದಬ್ಬಾಳಿಕೆ, ಹಲ್ಲೆ, ಅತ್ಯಾಚಾರಗಳು ನಡೆದರೆ ಬಲವಾಗಿ ಖಂಡಿಸುವ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಸೇನೆ ಬಲಿಷ್ಟಗೊಳ್ಳಬೇಕಾಗಿರುವುದರಿಂದ ಪದಾಧಿಕಾರಿಗಳು ನಿಷ್ಟೆ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಸೂಚಿಸಿದರು.
ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯ ಕಾರ್ಯದರ್ಶಿ ಜಿಲ್ಲಾಧ್ಯಕ್ಷ ರಾಮಚಂದ್ರ ಕೆ.ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಉಪಾಧ್ಯಕ್ಷ ಎಂ.ಆನಂದ್‍ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಜೆ.ಇ, ಜಿಲ್ಲಾ ಗೌರವಾಧ್ಯಕ್ಷ ತಿಪ್ಪೇಸ್ವಾಮಿ ಪಿ.ಎಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೃಷಬೇಂದ್ರಬಾಬು ಬಿ.ಎಸ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ಶಿವಕುಮಾರ್ ವಿ, ಜಿಲ್ಲಾ ಉಪಾಧ್ಯಕ್ಷ ಸಿದ್ದಪ್ಪ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.