Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಒತ್ತಾಯ 

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.21 : ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಮತ್ತು ಆದಿವಾಲ ಫಾರಂ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

ಪಟ್ರೆಹಳ್ಳಿ ಹಾಗೂ ಆದಿವಾಲ ಫಾರಂ ಗ್ರಾಮಗಳಲ್ಲಿ ಎಂಟುನೂರು ಮನೆಗಳಿದ್ದು, ದಲಿತರೆ ಹೆಚ್ಚಾಗಿ ಕುಡಿತಕ್ಕೆ ಬಲಿಯಾಗುತ್ತಿದ್ದಾರೆ. ದಿನನಿತ್ಯವೂ ಕೂಲಿ ಮಾಡಿ ಬದುಕುವ ಇವರುಗಳು ದುಡಿಮೆಯನ್ನೆಲ್ಲಾ ಕುಡಿತಕ್ಕೆ ಹಾಕಿದರೆ ಕುಟುಂಬದ ಗತಿ ಏನು ಎಂದು ಮಹಿಳೆಯರು ರೋಧಿಸುವಂತಾಗಿದೆ. ಹದಿಮೂರು ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಎಗ್ಗಿಲ್ಲದೆ ಮಾರಾಟವಾಗುತ್ತಿದೆ. ಸಾಕಷ್ಟು ಬಾರಿ ಅಬಕಾರಿ ಇಲಾಖೆಗೆ ದೂರು ನೀಡಿದರೂ ಕ್ರಮಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಶಿವಕುಮಾರ್ ವಿ. ಗೌರವಾಧ್ಯಕ್ಷ ತಿಪ್ಪೇಸ್ವಾಮಿ, ಗಿರೀಶ್‍ಕುಮಾರ್ ವಿ. ರೇವಣಸಿದ್ದಪ್ಪ, ಮಹಮದ್‍ರಫಿ, ರಾಘವೇಂದ್ರ ಆರ್.
ರವಿಕುಮಾರ್ ಎಸ್. ತಿಪ್ಪೇಶ್, ವಿನೋದ್‍ಕುಮಾರ್, ಮಂಜುನಾಥ್ ಹೆಚ್. ಸಿದ್ದಪ್ಪ, ಹನುಮಂತು, ಶಿವರಾಜ್, ಮ.ಮೋಸಿನ್, ದಾದಾಪೀರ್, ವಿಜಯಕುಮಾರ್, ಸುರೇಶ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆರ್ಟಿಕಲ್ 370 ರದ್ದತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ

  370 ನೇ ವಿಧಿ ಕುರಿತು SC ತೀರ್ಪು : 370 ನೇ ವಿಧಿಯನ್ನು ರದ್ದುಗೊಳಿಸುವುದು ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್

370 ನೇ ವಿಧಿ : ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು :  ಕಾಶ್ಮೀರದಲ್ಲಿ ಬಿಗಿ ಭದ್ರತೆ

  ಸುದ್ದಿಒನ್ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುತ್ತಿದ್ದ 370 ನೇ ವಿಧಿಯನ್ನು ರದ್ದುಗೊಳಿಸಿ 4 ವರ್ಷಗಳು ಕಳೆದಿವೆ. ಆದರೆ, 370ನೇ ವಿಧಿ ರದ್ದತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ,

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ, ಈ ರಾಶಿಯವರಿಗೆ ಇಷ್ಟವಿಲ್ಲದ ಮದುವೆ, ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-11,2023 ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ

error: Content is protected !!