Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಗದೀಶ್ ಶೆಟ್ಟರ್ ಗೆ ಅಮಿತ್ ಶಾ ಕರೆ : ಮತ್ತೆ ಬಿಜೆಪಿಗೆ ಕರೆಸಿಕೊಳ್ಳುವ ಪ್ಲ್ಯಾನ್ ನಡಿತಿದ್ಯಾ..?

---Advertisement---

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಒಂದು ಕಡೆ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ, ಹೋದವರನ್ನು ವಾಪಸ್ ಕರೆಸಿಕೊಳ್ಳುತ್ತಿದೆ ಎನ್ನಲಾಗಿದೆ. ಅದಕ್ಕೆ ತಕ್ಕ ಹಾಗೇ ಬಿಜೆಪಿಯಲ್ಲಿರುವವರು ಸಿಎಂ ಹಾಗೂ ಡಿಸಿಎಂ ಭೇಟಿ ಮಾಡುತ್ತಿದ್ದಾರೆ. ಇದೀಗ ಬಿಜೆಪಿ ಕೂಡ ತಮ್ಮವರನ್ನು ವಾಪಾಸ್ ಕರೆಸಿಕೊಳ್ಳಲು ಪ್ಲ್ಯಾನ್ ರೂಪಿಸಿದೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಜಗದೀಶ್ ಶೆಟ್ಟರ್, ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬಂದಿದ್ದಾರೆ. ಈಗ ಲೋಕಸಭಾ ಚುನಾವಣೆ ಹತ್ತಿರದಲ್ಲಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಸಾಕಷ್ಟು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಲಿಂಗಾಯತರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ಜಗದೀಶ್ ಶೆಟ್ಟರ್ ನೇತೃತ್ವವಹಿಸಲಿದ್ದಾರೆ ಎನ್ನಲಾಗಿದೆ. ಇದರ ಮಧ್ಯೆ ಕೇಂದ್ರ ಸಚಿವ ಅಮಿತ್ ಶಾ ಕಡೆಯಿಂದ ಜಗದೀಶ್ ಶೆಟ್ಟರ್ ಗೆ ಕಾಲ್ ಬಂದಿದೆ ಎನ್ನಲಾಗ್ತಿದೆ.

ಲೋಕಸಭಾ ಚುನಾವಣೆ ಮುಖ್ಯವಾಗಿರುವ ಹಿನ್ನೆಲೆ ಕೇಂದ್ರ ನಾಯಕರೇ ಮುಂದಾಳತ್ವ ವಹಿಸಿದ್ದಾರೆ ಎನ್ನಲಾಗ್ತಾ ಇದೆ. ಪಕ್ಷ ಬಿಟ್ಟು ಹೋದ ನಾಯಕರ ಮನವೊಲಿಕೆಗೆ ಬಿಜೆಪಿ ಕೇಂದ್ರ ನಾಯಕರೇ ಮುಂದಾಗಿದ್ದಾರೆ. ಇತ್ತೀಚಿಗೆ ಸಂಸದೆ ಶೋಭಾ ಕರಂದ್ಲಾಜೆ ಕೂಡ ಜಗದೀಶ್​ ಶೆಟ್ಟರ್​ ಮತ್ತು ಶಾಸಕ ಲಕ್ಷ್ಮಣ ಸವದಿ ಅವರಿಗೆ ಪರೋಕ್ಷವಾಗಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಇದೀಗ ಸಚಿವ ಅಮಿತ್​ ಶಾ ಶೆಟ್ಟರ್​​ಗೆ ಕರೆ ಮಾಡಿದ್ದಾರೆ. ನಿನ್ನೆ (ಆ.25) ಸಂಜೆ ಅಮಿತ್​ ಶಾ ಕರೆ ಮಾಡಿದ್ದು, ಮನವೊಲಿಸಲು ಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮಿತ್​ ಶಾ, ಜಗದೀಶ್​ ಶೆಟ್ಟರ್​ಗೆ ಕರೆ ಮಾಡಿ 10 ನಿಮಿಷ ಮಾತನಾಡಿದ್ದಾರೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...