ಹುಬ್ಬಳ್ಳಿಯಲ್ಲಿ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಅಮಿತ್ ಶಾ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದು, ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ‌. ಬಳಿಕ ಬಿವಿಬಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಷಣ ಮಾಡಿದ್ದು, ದೇಶದ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ.

ದೇಶಕ್ಕಾಗಿ ಅನೇಕ ಮಹನೀಯರು ಪ್ರಟಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸು ಮಾಡಬೇಕಿದೆ. ಅಮೃತ ಮಹೋತ್ಸವ ಸಮಯದಲ್ಲಿ ಸಂಕಲ್ಪ ಮಾಡುತ್ತಿದ್ದೇನೆ. 2014ರಲ್ಲಿ ದೇಶದಲ್ಲಿ ಮಹತ್ವದ ಪರಿವರ್ತನೆಯಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ತಲುಪುವ ಸಂಕಲ್ಪ ಮಾಡಲಾಗಿದೆ. ಕೇವಲ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ದಿ ಆಗ್ತಿದೆ.

ಆಜಾದಿ ಕಾ ಅಮೃತ್ ಮಹೋತ್ಸ. ಸಂದರ್ಭದಲ್ಲಿ ಸಂಕಲ್ಪ ಮಾಡುತ್ತಿದ್ದೇವೆ. ದೇಶದಲ್ಲಿ ಇಂದು ಏಳು ಸಾವಿರ ಸ್ಟಾರ್ಟ್ ಅಪ್ ಗಳು ಸ್ಥಾಪನೆಯಾವಿವೆ. ಬ್ರಿಟಿಷರ ವಿರುದ್ಧ ಲಾಲ್, ಪಾಲ್, ಬಾಲ್ ಹೋರಾಟ ಮಾಡಿದ್ದರು. ನಾವೆಲ್ಲಾ ಆಜಾದಿ ಕಾ ಅಮೃತ ಮಹೋತ್ಸವದ ಕಾಲಘಟ್ಟದಲ್ಲಿದ್ದೇವೆ ಎಂದು ಭಾಷಣ ಮುಗಿಸಿ ಅಲ್ಲಿಂದ ಧಾರವಾಡಕ್ಕೆ ಹೊರಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *