ಈ ಬಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲೇ ಬೇಕೆಂದು ಮೂರು ಪಕ್ಷಗಳು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಅದರಲ್ಲೂ ಬಿಜೆಪಿ ಪಕ್ಷ ಗೆಲುವಿಲ್ಲದ ಸ್ಥಳದಲ್ಲಿ ಗೆಲುವು ಸಾಧಿಸಲು ಹೊರಟಿದೆ. ಹಳೆ ಮೈಸೂರು ಭಾಗದ ಕಡೆ ಹೆಚ್ಚೇನು ತಲೆ ಹಾಕದ ಬಿಜೆಪಿ ಈಗ ಅದೇ ಸ್ಥಳವನ್ನು ಟಾರ್ಗೆಟ್ ಲೀಸ್ಟ್ ನಲ್ಲಿ ಸೇರಿಸಿಕೊಂಡಿದೆ.
ಹಳೆ ಮೈಸೂರು ಭಾಗ ಜೆಡಿಎಸ್ ನ ಭದ್ರಕೋಟೆಯಾಗಿದೆ. ನಾವೂ ಯಾರ ಜೊತೆಗೂ ಹೊಂದಾಣಿಕೆ ರಾಜಕಾರಣ ಮಾಡಲ್ಲ ಎಂದು ಹೇಳಿದ್ದ ಅಮಿತ್ ಶಾ, ಈಗ ಹಳೆ ಮೈಸೂರು ಭಾಗದಲ್ಲಿ ಕಾಂಗ್ರಸ್ ನಾಯಕನನ್ನೇ ಆಪರೇಷನ್ ಕಮಲ ಮಾಡಿದೆ ಎನ್ನಲಾಗಿದೆ. ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಮೇಲೆ ರಾಜ್ಯ ಬಿಜೆಪಿ ನಾಯಕರು ಕೂಡ ಫುಲ್ ಅಲರ್ಟ್ ಆಗಿದ್ದಾರೆ. ಪಕ್ಷದ ಉದ್ಧಾರಕ್ಕೆ ಹೈಜಾಕ್, ಪ್ರಚಾರ ಎರಡನ್ನು ಮಾಡುವುದಕ್ಕೆ ನಿಂತಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಅಲ್ಲಾಡಿಸಲು ಯಾರಿಗೂ ಸಾಧ್ಯವಿಲ್ಲ. ಹೀಗಾಗಿ ಅಲ್ಲಿ ಸ್ಟ್ರಾಂಗ್ ಕ್ಯಾಂಡಿಡೇಟ್ ಅನ್ನೇ ಹಾಕುವುದಕ್ಕೆ ಬಿಜೆಪಿ ನಿರ್ಧಾರ ಮಾಡಿದ್ದು, ಅದಕ್ಕೆಂದೆ ಕಾಂಗ್ರೆಸ್ ಮಾಜಿ ಶಾಸಕ ವಾಸು ಪುತ್ರ ಕವೀಶ್ ಗೌಡ ಅವರನ್ನು ಆಪರೇಷನ್ ಕಮಲದ ಮೂಲಕ ಸೆಳೆದಿದ್ದಾರೆ ಎನ್ನಲಾಗಿದೆ. ಕವೀಶ್ ಗೌಡ, ಅದಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳಿ ಒನ್ ಟು ಒನ್ ಸಭೆ ಕೂಡ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ಎರಡು ಬಾರಿ ಫೋನ್ ಮೂಲಕವೂ ಮಾತನಾಡಿ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಇನ್ನು ಜನವರಿ 25ರಂದು ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಕವೀಶ್ ಗೌಡ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇನ್ನು ಕವೀಶ್ ಗೌಡ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರಂತೆ. ಜೆಡಿಎಸ್ ನ ಜಿಟಿ ದೇವೇಗೌಡ ಅವರ ವಿರುಧವಾಗಿ ಸ್ಪರ್ಧೆಗೆ ಇಳಿಯಲಿದ್ದಾರೆ ಎನ್ನಲಾಗಿದೆ.