Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದಾವಣಗೆರೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಅಮಿತ್ ಶಾ ಬೇಸರ : ಶಾಮನೂರು, ಪ್ರಭಾ ಮಲ್ಲಿಕಾರ್ಜುನ, ರೇಣುಕಾಚಾರ್ಯ ಯಾರೆಲ್ಲರ ಬಗ್ಗೆ ಚರ್ಚೆ ಆಯ್ತು..?

---Advertisement---

 

ಬೆಂಗಳೂರು; ಕಳೆದ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದೆ. ಆದರೆ ಈ ಸೋಲನ್ನ ಅದ್ಯಾಕೋ ಏನೋ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಚುನಾವಣೆಯಲ್ಲಿ ಸೋಲಾಗಿ ಒಂದು ವರ್ಷವಾದರು ಈಗಲೂ ರಾಜ್ಯ ನಾಯಕರ ಮೇಲೆ ಅಸಮಾಧಾನ ಹಿರ ಹಾಕಿದ್ದಾರೆ. ನಿಮ್ಮ ಆಂತರಿಕ ಕಚ್ಚಾಟದ ಫಲವಾಗಿಯೇ ಕಾಂಗ್ರೆಸ್ ಗೆ ಗೆಲುವಾಗಿರುವುದು ಎಂದು ಬೇಸರ ವ್ಯಕ್ತಪಡಿಸಿದರು ಎನ್ನಲಾಗಿದೆ.

ಬೆಂಗಳೂರಿಗೆ ಬಂದ ಅಮಿತ್ ಶಾ ಅವರನ್ನು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಆರ್.ಅಶೋಕ್ ಸೇರಿದಂತೆ ಹಲವರು ಭೇಟಿಯಾಗಿದ್ದಾರೆ. ಈ ವೇಳೆ ಬಿಜೆಪಿ ಸಂಘಟನೆಯ ವೈಫಲ್ಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ನೀವೂ ಸರಿಯಾಗಿ ಕೆಲಸ ಮಾಡಿದ್ದರೆ ಶಾಮನೂರು ಶಿವಶಂಕರಪ್ಪ ಮನೆತನದ ರಾಜಕೀಯ ಪಾರಮ್ಯ ಮುಗಿದು ಹೋಗುತ್ತಿತ್ತು. ನಿಮ್ಮ ಮೇಲಾಟದಿಂದ ಆ ಕುಟುಂಬಕ್ಕೆ ರಾಜಕೀಯ ಪುನರ್ಜನ್ಮ ಸಿಕ್ಕಿತು. ಪ್ರಭಾ ಮಲ್ಲಿಕಾರ್ಜುನ ಅವರಿಗೆ ರಾಜಕೀಯ ಜಾಣ್ಮೆ ಇದೆ. ಸುಮಲತಾ ಅವರಂತೆ ಅವರಿಗೂ ರಾಜಕೀಯ ಲೆಕ್ಕಾಚಾರ ಗೊತ್ತು. ನಿಮ್ಮೆಲ್ಲರ ಕಿತ್ತಾಟದ ಫಲವಾಗಿ ಕಾಂಗ್ರೆಸ್ ನಲ್ಲಿ ಮತ್ತೊಂದು ಲಿಂಗಾಯತ ನಾಯಕತ್ವ ಸೃಷ್ಟಿಯಾಗುವುದಕ್ಕೆ ಕೊಡುಗೆ ನೀಡಿದ್ದೀರಿ. ಇದರ ಹೊಣೆಯನ್ನು ನೀವೇ ಹೊರಬೇಕಾಗುತ್ತದೆ ಎಂದಿದ್ದಾರೆ ಎನ್ನಲಾಗಿದೆ.

ಜೊತೆಗೆ ರೇಣುಕಾಚಾರ್ಯ ಏನು ಮಾಡ್ತಾ ಇದ್ದಾರೆ ಎಂದು ಕೂಡ ಕೇಳಿದ್ದಾರೆ ಎನ್ನಲಾಗಿದೆ. ಯತ್ನಾಳ್ ವಿಚಾರವೂ ಈ ಸಭೆಯಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ. ಒಟ್ಟಾರೆ ಚುನಾವಣೆ ಕಳೆದು ವರ್ಷವಾಗಿದ್ದರು ಸೋಲಿನ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment