ಡೆಂಗ್ಯುವಿಗೆ ಚಿಕ್ಕಬಳ್ಳಾಪುರದಲ್ಲಿ 18 ವರ್ಷದ ವಿದ್ಯಾರ್ಥಿನಿ ಬಲಿ..!

1 Min Read

 

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಆರೋಗ್ಯ ಇಲಾಖೆ ಕೂಡ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ಪಡುತ್ತಿದೆ. ಆದರೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇಂದು ಡೆಂಗ್ಯೂ ಜ್ವರಕ್ಕೆ ಚಿಕ್ಕಬಳ್ಳಾಪುರದ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿದ್ದಾಳೆ.

ಗೌರಿಬಿದನೂರಿನ ನ್ಯಾಮಗೊಂಡ್ಲು ಗ್ರಾಮದಲ್ಲಿ ಡೆಂಗ್ಯುನಿಂದ 18 ವರ್ಷದ ಯಶಸ್ವಿನಿ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶಸ್ವಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಯಶಸ್ವಿನಿ ಚಿಕ್ಕಬಳ್ಳಾಪುರದಲ್ಲಿಯೇ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಾ ಇದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಯಶಸ್ವಿನಿ ಸಾವನ್ನಪ್ಪಿದ್ದಾರೆ. ಯಶಸ್ವಿನಿ ಸಾವಿನಿಂದ ಕುಟುಂಬಸ್ಥರು, ಸ್ನೇಹಿತರಲ್ಲಿ ದುಃಖ ಮಡುಗಟ್ಟಿದೆ. ಬಾಳಿ ಬದುಕಬೇಕಿದ್ದ ಮಗಳನ್ನು ಕಳೆದುಕೊಂಡ ಪೋಷಕರು ಕಣ್ಣೀರಲ್ಲಿ ಮುಳುಗುವಂತೆ ಆಗಿದೆ.

ಯಶಸ್ವಿನಿ ಸಾವಿ‌ನ ಬಳಿಕ ಚಿಕ್ಕಬಳ್ಳಾಪುರದಲ್ಲಿ ಹೈಅಲರ್ಟ್ ಆಗಿದ್ದಾರೆ. ಆರೋಗ್ಯ ಇಲಾಖೆ ಕೂಡ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಜಿಲ್ಲೆಯಾದ್ಯಂತ ಸೊಳ್ಳೆಗಳ ನಿರ್ಮೂಲನೆಗೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಜನರಲ್ಲೂ ಯಶಸ್ವಿನಿ ಸಾವು ಆತಂಕ ಸೃಷ್ಟಿ ಮಾಡಿದೆ.

ಡೆಂಗ್ಯೂ ಜಾಸ್ತಿಯಾಗುತ್ತಿರುವ ಹಿನ್ನೆಲೆ ಈಗಾಗಲೇ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಆರೋಗ್ಯಾ್ದಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಡೆಂಗ್ಯೂ ಹೆಚ್ಚಾಗದಂತೆ ಎಚ್ಚರವಹಿಸಿ ಅದಕ್ಕೆ ಬೇಕಾದ ಅಗತ್ಯತೆಗಳನ್ನು ಕೈಗೊಳ್ಳಲು ಎಷ್ಟು ಹಣ ಬೇಕೋ ಅಷ್ಟನ್ನು ತಕ್ಷಣವೇ ರಿಲೀಸ್ ಮಾಡಲಾಗುತ್ತದೆ. ಆದರೆ ಎಲ್ಲಾ ಕಡರ ಡೆಂಗ್ಯೂ ನಿಯಂತ್ರಣ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಆದರೂ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿವೆ.

Share This Article
Leave a Comment

Leave a Reply

Your email address will not be published. Required fields are marked *