ಬೆಂಗಳೂರು: ಭಾಷಣದ ವಿಡಿಯೋ ಒಂದರಲ್ಲಿ ನಟ ಉಪೇಂದ್ರ ಎಸ್ಸಿ/ಎಸ್ ಟಿ ಸಮುದಾಯದವರನ್ನು ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಎಫ್ಐಆರ್ ದಾಖಲಾಗಿದೆ. ನಿನ್ನೆ ಸಿಕೆ ಅಚ್ಚುಕಟ್ಟು ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಇಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಕರ್ನಾಟಕ ರಣಧೀರ ಪಡೆಯ ಭೈರಪ್ಪ ಹರೀಶ್ ಎಂಬುವವರು ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 505(1)(c),153a, 295 a ಹಾಗೂ ಎಸ್ಸಿ, ಎಸ್ಟಿ ಪ್ರಿವೆನ್ಷನ್ ಆಕ್ಟ್ 3(1) (r) (s) ಅಡಿ ಎಫ್ಐಆರ್ ದಾಖಲಾಗಿದೆ.
ನಿನ್ನೆ ಫೇಸ್ ಬುಕ್ ಲೈವ್ ನಲ್ಲಿ ನಟ ಉಪೇಂದ್ರ ಮಾತನಾಡುವಾಗ ಊರು ಇದ್ದೆಡೆ ಹೊಲಗೇರಿ ಇರುತ್ತೆ ಎಂಬ ಗಾದೆ ಮಾತನ್ನು ಬಳಕೆ ಮಾಡಿ, ಒಂದು ಸಮುದಾಯಕ್ಕೆ ಅವಮಾನ ಮಾಡಿದ್ದರು. ಈ ಸಂಬಂಧ ದೂರು ದಾಖಲಾಗಿದೆ. ಇನ್ನು ಉಪೇಂದ್ರ ಕ್ಷಮೆಯನ್ನು ಕೇಳಿದ್ದಾರೆ. ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ.
50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು ? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ಧ್ವೇಷ ? ಎಂದು ಟ್ವೀಟ್ ಮಾಡಿದ್ದಾರೆ.