Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟ‌ ಉಪೇಂದ್ರ ವಿರುದ್ಧ ನಿನ್ನೆ ಒಂದು ಇವತ್ತು ಒಂದು ಎಫ್ಐಆರ್ ದಾಖಲು..!

---Advertisement---

 

 

ಬೆಂಗಳೂರು: ಭಾಷಣದ ವಿಡಿಯೋ ಒಂದರಲ್ಲಿ ನಟ ಉಪೇಂದ್ರ ಎಸ್ಸಿ/ಎಸ್ ಟಿ ಸಮುದಾಯದವರನ್ನು ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಎಫ್ಐಆರ್ ದಾಖಲಾಗಿದೆ. ನಿನ್ನೆ ಸಿಕೆ ಅಚ್ಚುಕಟ್ಟು ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಇಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಕರ್ನಾಟಕ ರಣಧೀರ ಪಡೆಯ ಭೈರಪ್ಪ ಹರೀಶ್ ಎಂಬುವವರು ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 505(1)(c),153a, 295 a ಹಾಗೂ ಎಸ್​​ಸಿ, ಎಸ್​ಟಿ ಪ್ರಿವೆನ್ಷನ್ ಆಕ್ಟ್​ 3(1) (r) (s) ಅಡಿ ಎಫ್​​ಐಆರ್​ ದಾಖಲಾಗಿದೆ.

ನಿನ್ನೆ ಫೇಸ್ ಬುಕ್ ಲೈವ್ ನಲ್ಲಿ ನಟ ಉಪೇಂದ್ರ ಮಾತನಾಡುವಾಗ ಊರು ಇದ್ದೆಡೆ ಹೊಲಗೇರಿ ಇರುತ್ತೆ ಎಂಬ ಗಾದೆ ಮಾತನ್ನು ಬಳಕೆ ಮಾಡಿ, ಒಂದು ಸಮುದಾಯಕ್ಕೆ ಅವಮಾನ ಮಾಡಿದ್ದರು. ಈ ಸಂಬಂಧ ದೂರು ದಾಖಲಾಗಿದೆ. ಇನ್ನು ಉಪೇಂದ್ರ ಕ್ಷಮೆಯನ್ನು ಕೇಳಿದ್ದಾರೆ. ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ.
50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು ? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ಧ್ವೇಷ ? ಎಂದು ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment