ತನ್ನ ಉದ್ಯಮಕ್ಕೆ ಎದುರಾಳಿಯೆಂದು ಎಂಡಿ, ಸಿಇಒ ಇಬ್ಬರನ್ನೂ ಕೊಂದ ಹಳೆ ಉದ್ಯೋಗಿ..!

ಬೆಂಗಳೂರು: ಕೆಲವೊಮ್ಮೆ ಕೊಲೆಗಳ ಹಿಂದಿನ ಕಾರಣ ಕೇಳಿದ್ರೆ ಬೆಚ್ಚಿ ಬೀಳಸುತ್ತೆ. ಇಷ್ಟು ಸಿಲ್ಲಿ ಕಾರಣಕ್ಕೆ ಪ್ರಾಣವನ್ನೇ ತೆಗೆದುಬಿಟ್ಟರಲ್ಲ ಅಂತ. ಅಂತದ್ದೇ ಘಟನೆ ಈಗ ಬೆಂಗಳೂರಲ್ಲೂ ನಡೆದಿದೆ. ಹಾಡಹಗಲೇ ಕಂಪನಿಯೊಂದರ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಅಮೃತಹಳ್ಳಿಯಲ್ಲಿ ನಡೆದಿದೆ.

ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಪಣೀಂದ್ರ ಹಾಗೂ ಸಿಇಒ ವಿನು ಕುಮಾರ್ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಇದೇ ಸಂಸ್ಥೆಯ ಮಾಜಿ ಉದ್ಯೋಗಿ ಫೆಲಿಕ್ಸ್ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ತನ್ನ ಉದ್ಯಮಕ್ಕೆ ಹಳೇ ಕಂಪನಿ ಎದುರಾಳಿಯಾಗಿದ್ದರಿಂದ ಫೆಲಿಕ್ಸ್ ಈ ಕೊಲೆ ಮಾಡಿದ್ದಾನೆ.

ಫೆಲಿಕ್ಸ ಏರೋನಿಕ್ಸ್ ಕಂಪನಿಯಿಂದ ಹೊರ ಬಂದು ತನ್ನದೇ ಸ್ವಂತ ಕಂಪನಿ ಆರಂಭಿಸಿದ್ದ. ತನ್ನ ಉದ್ಯಮಕ್ಕೆ ಹಳೇ ಕಂಪನಿ ಎದುರಾಳಿ ಆಗಿದ್ದರಿಂದ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆಗೆ ಸಂಚು ಹೂಡಿದ್ದ ಫೆಲಿಕ್ಸ್, ಇಂದು ಸಂಜೆ 4 ಗಂಟೆಗೆ ಚಾಕು ಮತ್ತು ತಲ್ವಾರ್ ನಿಂದ ಫಣೀಂದ್ರ ಮತ್ತು ವಿನು ಕುಮಾರ್ ಮೇಲೆ ದಾಳಿ ಮಾಡಿ, ಕೊಲೆಗೈದಿದ್ದ. ಒಟ್ಟು ಮೂವರು ಜತೆಯಾಗಿ ಈ ಕೃತ್ಯವೆಸಗಿದ್ದು, ಒಂದು ಕೊಲೆ ತಳಮಹಡಿಯಲ್ಲಿ ಇನ್ನೊಂದು ಕೊಲೆ ಮೂರನೇ ಮಹಡಿಯಲ್ಲಿ ನಡೆದಿದೆ. ಪ್ರಕರಣದ ಬಳಿಕ ಆರೋಪಿಗಳು ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಸದ್ಯ ಅಮೃತಳ್ಳಿ ಪೊಲೀಸರು ಕೊಲೆ ಕೇಸನ್ನು ವಿಚಾರಣೆ ನಡೆಸುತ್ತಿದ್ದಾರೆ.

suddionenews

Recent Posts

ಬೆಳ್ಳಂಬೆಳಗ್ಗೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಲೋಕಾಯುಕ್ತರಿಂದ ದಾಳಿ..!

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…

41 minutes ago

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…

2 hours ago

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

5 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

6 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

15 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

15 hours ago