ಬೆಂಗಳೂರು: ಕಳೆದ ಬಾರಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಪಠ್ಯ ಪುಸ್ತಕದಲ್ಲಿ ದೊಡ್ಡಮಟ್ಟದ ಬದಲಾವಣೆಯಾಗಿತ್ತು. ಕೆಲವೊಂದು ಪಠ್ಯಗಳನ್ನು ತೆಗೆದು ಹಾಕಲಾಗಿತ್ತು. ಇದಕ್ಕೆ ದೊಡ್ಡಮಟ್ಟದ ವಿರೋಧ ಕೂಡ ಎದುರಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮತ್ತೆ ಪಠ್ಯ ಪುಸ್ತಕದ ವಿಚಾರವಾಗಿ ಚರ್ಚೆ ನಡೆಯುತ್ತಾ ಇದೆ.
ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾತನಾಡಿ, 6 ರಿಂದ 10 ನೇ ತರಗತಿಯವರೆಗೆ ಸಮಾಜ ವಿಜ್ಞಾನ ಮತ್ತು ಕನ್ನಡ ಪಠ್ಯ ಪುಸ್ತಕದಲ್ಲಿ ಮಾಡಿರುವ ಪರಿಷ್ಕರಣೆ ಬಗ್ಗೆ ವಿವರಣೆ ನೀಡದ್ದಾರೆ. ಪಠ್ಯಗಳಿಂದ ಹಿಂದಿನ ಬಿಜೆಪಿ ಸರ್ಕಾರ ತೆಗೆದು ಹಾಕಿದ್ದ ಪಾಠಗಳನ್ನು ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾವಿತ್ರಿ ಪುಲೆ, ನೀ ಹೋದ ಮರುದಿನ, ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ತಮ್ಮ ಮಗಳು ಇಂದಿರಾ ಗಾಂಧಿಯವರಿಗೆ ಬರೆದ ಪತ್ರ ಮೊದಲಾದ ಪಾಠಗಳನ್ನು ಸೇರಿಸಲಾಗಿದೆ. . ತಜ್ಞರ ಸಲಹೆ ಮೇರೆಗೆ ಮತ್ತು ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.