ಬಿಜೆಪಿ ಕಾರ್ಯಕರ್ತರಿಂದಾನೇ ಅನಂತ್ ಕುಮಾರ್ ಹೆಗ್ಡೆಗೆ ಕ್ಲಾಸ್

1 Min Read

 

ಬೆಳಗಾವಿ: ಕೆಲ ತಿಂಗಳುಗಳಿಂದ ಎಲ್ಲಿಯೂ ಕಾಣಿಸಿಕೊಳ್ಳದ ಅನಂತ್ ಕುಮಾರ್ ಹೆಗ್ಡೆ, ಇತ್ತೀಚೆಗೆ ಬಾರಿ ಸುದ್ದಿಯಲ್ಲಿದ್ದಾರೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಬಿಜೆಪಿ ಕಾರ್ಯಕರ್ತರೇ ಆ ಮಾತುಗಳನ್ನು ವಿರೋಧಿಸಿದ್ದರು. ಇದೀಗ ಬಿಜೆಪಿ ಕಾರ್ಯಕರ್ತರೇ ಅನಂತ್ ಕುಮಾರ್ ಹೆಗ್ಡೆಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಬಿಜೆಪಿ ಕಾರ್ಯಕ್ರಮವೊಂದು ನಡೆದಿದೆ. ಈ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗ್ಡೆ ಕೂಡ ಭಾಗಿಯಾಗಿದ್ದರು. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ, ಜನರ ಕೈಗೆ ಸಿಕ್ತಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ನೀವೂ ಕಾರ್ಯಕರ್ತರ ಕೈಗೆ ಸಿಗುತ್ತಿಲ್ಲ. ನಿಮ್ಮ ಪಿಎಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಖಾನಾಪುರದಲ್ಲಿ ಸಂಸದರ ಕಾರ್ಯಾಲಯ ತೆರೆಯಿರಿ ಎಂದು ಸಭೆಯಲ್ಲಿ ಒತ್ತಾಯಿಸಿದ್ದಾರೆ.

ಇನ್ನು ಖಾನಾಪುರದ ಜನ ಬೆಳಗಾವಿಗೆ ಹೋದರೆ ಕಾರಾವಾರಕ್ಕೆ ಹೋಗಿ ಅಂತಾರೆ. ಕಾರವಾರಕ್ಕೆ ಹೋದರೆ ನೀವೂ ಬೆಳಗಾವಿಯವರು ಅಲ್ಲಿಗೆ ಹೋಗಿ ಅಂತಾರೆ. ಖಾನಾಪುರದ ಜನ ನಡುವಿನಲ್ಲಿ ಸಿಕ್ಕಿ ಒದ್ದಾಡುತ್ತಿದ್ದಾರೆ. ಐದು ಬಾರಿ ಸಂಸದರಾಗಿದ್ದೀರಿ, ಆದರೆ ಖಾನಾಪುರದಲ್ಲಿ ಕೇಂದ್ರ ಸರ್ಕಾರದ ಯೋಜನೆ ಒಂದು ಗೊತ್ತಿಲ್ಲ. ಜನರಿಗೆ ನಿಮ್ಮ ಸ್ಪಂದನೆ ಸಿಗುತ್ತಿಲ್ಲ. ಅನಂತ್ ಕುಮಾರ್ ಹೆಗ್ಡೆ ಎಲ್ಲಿದ್ದಾರೆ ಅಂತ ಜನ ಪ್ರಶ್ನೆ ಮಾಡುತ್ತಿದ್ದಾರೆ. ನಿಮ್ಮನ್ನ ಭೇಟಿಯಾಗಲು 200 ಕಿಲೋ ಮೀಟರ್ ಬಂದರು ನೀವೂ ಸಿಗುವುದಿಲ್ಲ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅನಂತ್ ಕುನಾರ್ ಹಗ್ಡೆ ಅಲರ್ಟ್ ಆಗಿದ್ದಾರೆ. ಎಲ್ಲಾ ಕಡೆ ಸಂಚಾರ ನಡೆಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಹಳ ದಿನಗಳ ಕಾಲ ಕಾಣದ ಅನಂತ್ ಕುಮಾರ್ ಹೆಗ್ಡೆಗೆ ಜನ ಇರಲಿ ಅವರದ್ದೇ ಪಕ್ಷದ ಕಾರ್ಯಕರ್ತರು ಕ್ಲಾಸ್ ತೆಗೆದುಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *